ತುಂಬೆ ಕಾಲೇಜಿನಲ್ಲಿ ಕಸಾಪ ದತ್ತಿ ಉಪನ್ಯಾಸ

ತುಂಬೆ ಕಾಲೇಜಿನಲ್ಲಿ ಕಸಾಪ ದತ್ತಿ ಉಪನ್ಯಾಸ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಒಟ್ಟು 32 ದತ್ತಿ ನಿಧಿಗಳಿದ್ದು, ಅವುಗಳಲ್ಲಿ ಅತಿ ಹೆಚ್ಚು 13 ದತ್ತಿ ಬಂಟ್ವಾಳ ತಾಲ್ಲೂಕಿನಲ್ಲಿದೆ. ಇದರ ಸದ್ವಿನಿಯೋಗವನ್ನು ವರ್ಷಂಪ್ರತಿ ಪಡೆಯಲಾಗುತ್ತಿದೆ ಎಂದು ದ.ಕ.ಜಿಲ್ಲಾ ಕಸಾಪದ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಹೇಳಿದರು.

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ತುಂಬೆ ಪದವಿ ಪೂರ್ವ ಕಾಲೇಜು ಜಂಟಿಯಾಗಿ ಏರ್ಪಡಿಸಿದ್ದ ದತ್ತಿ ನಿಧಿ ಉಪನ್ಯಾಸ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ರಾಂತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಅವರು ದಿ.ಕೆ ಸುಬ್ಬಣ್ಣ ಭಟ್ ದತ್ತಿ ಉಪನ್ಯಾಸದಲ್ಲಿ ‘ಕನ್ನಡ ಕಾವ್ಯಗಳ ಮೇಲೆ ಸಂಸ್ಕೃತದ ಪ್ರಭಾವ’ ಎಂಬುದರ ಕುರಿತು ಮಾತನಾಡಿದರು. ಎನ್.ಗಣಪತಿ ಭಟ್ ಅವರ ಹೆಸರಿನ ದತ್ತಿ ಉಪನ್ಯಾಸ ನೀಡಿದ ಕವಯತ್ರಿ ರಜನಿ ಚಿಕ್ಕಯಮಠ ‘ಸಂಸ್ಕಾರ ಸಮಾಜ’ ಎಂಬ ವಿಷಯದಲ್ಲಿ ಮಾತನಾಡಿದರು. ಮೆಲ್ಕಾರ್ ಮಹಿಳಾ ಪದವಿ ಮತ್ತು ಪ.ಪೂ.ಕಾಲೇಜುಗಳ ಪ್ರಾಂಶುಪಾಲ ಅಬ್ದುಲ್ ಮಜೀದ್ ಎಸ್. ಅವರು ಜಿ. ಅಬ್ದುಲ್ ಖಾದರ್ ಗೋಳ್ತಮಜಲು ಅವರ ಹೆಸರಿನ ದತ್ತಿನಿಧಿ ಉಪನ್ಯಾಸ ನೀಡಿ, ‘ಜಾತ್ಯತೀತ ಸಮಾಜ ನಿರ್ವಹಣೆ’ ಎಂಬ ವಿಷಯದ ಬಗ್ಗೆ ಮಾತನಾಡಿದರು.

ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿ.ಸು.ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಹಜಾಜ್ ಗ್ರೂಪ್ ಆಫ್ ಇಂಡಸ್ಟ್ರೀಸ್‌ನ ಆಡಳಿತ ನಿರ್ದೇಶಕ ಹನೀಫ್, ಬಂಟ್ವಾಳ ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಪದಾಽಕಾರಿ ಸಾಯಿರಾಂ ನಾಯಕ್ ಕೆ., ಮುಹಿಯುದ್ದೀನ್ ಎಜುಕೇಶನ್ ಟ್ರಸ್ಟ್‌ನ ಕಚೇರಿ ಅಽಕ್ಷಕ ಅಬ್ದುಲ್ ಕಬೀರ್ ಉಪಸ್ಥಿತರಿದ್ದರು.

ಕಾಲೇಜಿನ ಉಪ ಪ್ರಾಂಶುಪಾಲ ದಿನೇಶ ಶೆಟ್ಟಿ ಅಳಿಕೆ ಸ್ವಾಗತಿಸಿದರು. ಬಂಟ್ವಾಳ ಕಸಾಪದ ಕೋಶಾಽಕಾರಿ ಅಬ್ದುಲ್ ರಹಿಮಾನ್ ಡಿ.ಬಿ. ವಂದಿಸಿದರು. ಇತಿಹಾಸ ಉಪನ್ಯಾಸಕ ಶರತ್ ಆಳ್ವ ಚನಿಲ ನಿರೂಪಿಸಿದರು. ಅಶೋಕ್ ಸಹಕರಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article