ದೇವಸ್ಥಾನಗಳ ಚರಾಸ್ತಿಗಳ ಸುರಕ್ಷತೆಗೆ ಮುಂಜಾಗ್ರತಾ ಕ್ರಮವಹಿಸಲು ಸೂಚನೆ: ಹುಂಡಿ ಎಣಿಕೆ ಪ್ರಕ್ರಿಯೆ ಸಂಪೂರ್ಣ ವಿಡಿಯೋ ಚಿತ್ರೀಕರಣ
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಧಾರ್ಮಿಕ ದತ್ತಿ ಇಲಾಖೆಯ ಜಿಲ್ಲಾ ಮಟ್ಟದ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇವಾಲಯಗಳ ವಿವಿಧ ಸೂಕ್ತ ಜಾಗಗಳನ್ನು ಗುರುತಿಸಿ, ಎಲ್ಲರಿಗೂ ಕಾಣುವಂತೆ ಹುಂಡಿಗಳನ್ನು ಅಳವಡಿಸಿ, ಸೂಕ್ತ ಭದ್ರತೆ ಒದಗಿಸಬೇಕು. ಡಿಜಿಟಲ್ ದೇಣಿಗೆ ಮತ್ತು ನಗದು ರಹಿತ ಪಾವತಿಗಳನ್ನು ಸುಗಮಗೊಳಿಸಲು, ಭಕ್ತರು ಮತ್ತು ಸಂದರ್ಶಕರು ದೇಣಿಗೆ ನೀಡಲು, ಪ್ರಸಾದ, ಸೇವಾ ಟಿಕೆಟ್‌ಗಳು ಮತ್ತು ಇತರ ದೇವಾಲಯ ಸೇವೆಗಳನ್ನು ನಗದು ರಹಿತ ವಿಧಾನಗಳ ಮೂಲಕ ಖರೀದಿಸಲು ದೇವಾಲಯಗಳಲ್ಲಿ ಡಿಜಿಟಲ್ ಪಾವತಿ ಸೌಲಭ್ಯಗಳನ್ನು ಒದಗಿಸಬೇಕು. ಹಾಗೂ ಕ್ಯೂಆರ್ ಕೋಡ್‌ಗಳನ್ನು ದೇವಾಲಯದ ಅಧಿಕಾರಿಗಳು ಆಗಾಗ್ಗೆ ಪರಿಶೀಲಿಸುತ್ತಿರಬೇಕು ಎಂದು ಅವರು ಸೂಚಿಸಿದರು.
ವಿಡಿಯೋ ಚಿತ್ರೀಕರಣ..
ಹುಂಡಿ ಎಣಿಕೆಯನ್ನು ಸಂಬಂಧಪಟ್ಟ ತಹಶೀಲ್ದಾರರ ಮೇಲ್ವಿಚಾರಣೆಯಲ್ಲಿ ನಡೆಸಿ, ಹುಂಡಿ ಎಣಿಕೆ ಸಂದರ್ಭದಲ್ಲಿ ಸ್ವೀಕೃತವಾಗಬಹುದಾದ ಚಿನ್ನ ಬೆಳ್ಳಿ ಇತ್ಯಾದಿ ವಸ್ತುಗಳನ್ನು ಎಣಿಕೆ ದಿನದಂದೇ ಕಡ್ಡಾಯವಾಗಿ ಮೌಲ್ಯಮಾಪನ ಮಾಡಿಸಿ ಅಂದೇ ಸಂಬಂಧಪಟ್ಟ ಜಿಲ್ಲಾ ಉಪ ಖಜಾನೆಯಲ್ಲಿ ಸೂಕ್ತ ಮೇಲ್ವಿಚಾರಣೆಯೊಂದಿಗೆ ಜಮಾ ಮಾಡಬೇಕು ಎಂದು ಹೇಳಿದರು.
ಸ್ಥಳೀಯ ಕಂದಾಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಪ್ರಾಧಿಕಾರಗಳು ಮತ್ತು ಇತರೆ ಸಂಬಂಧಪಟ್ಟ ಅಧಿಕಾರಿಗಳು ಕನಿಷ್ಠ 15 ದಿನಗಳಿಗೊಮ್ಮೆ ದೇವಾಲಯಗಳಿಗೆ ಜಂಟಿಯಾಗಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಎಲ್ಲಾ ವ್ಯವಸ್ಥೆಗಳು ಸುವ್ಯವಸ್ಥಿತ ರೀತಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಕುಂದುಕೊರತೆಗಳು ಕಂಡುಬಂದಲ್ಲಿ ತಕ್ಷಣವೇ ಪರಿಹರಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ಅವರು ಸೂಚಿಸಿದರು.
ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತೆ ಜಯಮ್ಮ, ಮುಜುರಾಯಿ ತಹಶೀಲ್ದಾರ್ ಕಿರಣ್, ತಾಲೂಕು ತಹಶೀಲ್ದಾರ‍್ಗಳು, ಧಾರ್ಮಿಕ ದತ್ತಿ ಇಲಾಖೆಯ ಧಿಕಾರಿಗಳ ಕಾರ್ಯದರ್ಶಿಗಳು/ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.