ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ನಿಷೇಧ: ಆರೋಗ್ಯ ಸಚಿವ ಯು.ಟಿ. ಖಾದರ್

ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ನಿಷೇಧ: ಆರೋಗ್ಯ ಸಚಿವ ಯು.ಟಿ. ಖಾದರ್


ಮಂಗಳೂರು: ರಾಜ್ಯದ ಎಲ್ಲ ಆಸ್ಪತ್ರೆ ಹಾಗೂ ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್‌ಗಳಲ್ಲಿ ಆರೋಗ್ಯಕರ ಆಹಾರಗಳನ್ನು ಮಾತ್ರ ಕನಿಷ್ಠ ದರದಲ್ಲಿ ಮಾರಾಟ ಮಾಡಬೇಕು. ಇದನ್ನು ಹೊರತುಪಡಿಸಿ ಯಾವುದೇ ರೀತಿಯ ಜಂಕ್ ಫುಡ್‌ಗಳನ್ನು ಮಾರಾಟ ಮಾಡುವಂತಿಲ್ಲ. ರಾಜ್ಯಾದ್ಯಂತ ಈ ನಿಯಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು. 

ಮಂಗಳೂರಿನ ವೆನ್ಲಾಕ್‌ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಕುಂದುಕೊರತೆ ಹಾಗೂ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲಾ ಆಸ್ಪತ್ರೆಗಳ ಹಾಗೂ ಶಾಲೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ ಆಹಾರ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ವಿಪರೀತವಾಗಿ ಅವಲಂಬನೆಯಾಗಿರುವುದು ಕೂಡ ಸಾಕಷ್ಟು ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಕ್ಯಾನ್ಸರ್, ಮೂತ್ರಪಿಂಡ ಮೊದಲಾದ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಹೆಚ್ಚುತ್ತಿವೆ. ಇದನ್ನು ಶಾಲಾ ಅಥವಾ ಆಸ್ಪತ್ರೆ ಹಂತದಲ್ಲೇ ನಿಯಂತ್ರಿಸಿದರೆ, ಕನಿಷ್ಠ ದೇಹದ ಆರೋಗ್ಯವನ್ನೂದರೂ ಕಾಪಾಡಲು ಸಾಧ್ಯವಿದೆ. ಅದಕ್ಕಾಗಿ ಆಸ್ಪತ್ರೆ ಮಾತ್ರವಲ್ಲ ಒಂದರಿಂದ 10ನೇ ತರಗತಿವರೆಗೆ ಇರುವ ಶಾಲೆಗಳ ಸುತ್ತಮುತ್ತ ಕೂಡ ಜಂಕ್ ಫುಡ್ ಮಾರಾಟಕ್ಕೆ ಅವಕಾಶ ನೀಡದಂತೆ ನಿಯಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article