ರಸ್ತೆ ಬದಿಯಲ್ಲಿ ಕಸ ಸುರಿದ ಪ್ರಕರಣ: ದಂಡ ವಿಧಿಸಿದ ಪಂಚಾಯತ್
Wednesday, July 1, 2026
ಮಂಗಳೂರು: ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಕಸ ಸುರಿಯುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಿನ್ಯಾ, ಬೆಳ್ಮ ಹಾಗೂ ತಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮನಾಲೋಚಕರ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು.
ಪರಿಶೀಲನೆಯ ಸಂದರ್ಭದಲ್ಲಿ ತಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಒಂದು ಹೋಟೆಲ್‌ನವರು ಅನಧಿಕೃತವಾಗಿ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಕಸ ಸುರಿದು, ಅದಕ್ಕೆ ಬೆಂಕಿ ಹಚ್ಚಿರುವ ಕಾನೂನುಬಾಹಿರ ಚಟುವಟಿಕೆಗಳು ಕಂಡು ಬಂದಿದ್ದು, ಜಿಲ್ಲಾ ಪಂಚಾಯತ್ ಸಿಇಒ ಸೂಚನೆ ಮೇರೆಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರನ್ನು ಸ್ಥಳಕ್ಕೆ ಕರೆಸಿ ಕ್ರಮ ಕೈಗೊಂಡರು.
ಈ ಕೃತ್ಯವು ಪರಿಸರ ಮಾಲಿನ್ಯ ಉಂಟುಮಾಡುವುದರ ಜೊತೆಗೆ ಸಾರ್ವಜನಿಕ ಆರೋಗ್ಯಕ್ಕೂ ಹಾನಿಕಾರಕವಾಗಿರುವ ಹಿನ್ನೆಲೆಯಲ್ಲಿ ಸಂಬಂಧಿತ ಹೋಟೆಲ್‌ಗೆ ರೂ.2 ಸಾವಿರ ದಂಡ ವಿಧಿಸಿದ್ದು, ಇಂತಹ ಕೃತ್ಯಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು.