ಮುಡಾ ವತಿಯಿಂದಲೇ ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ನಡೆಯಲಿ: ಶಾಸಕ ಕಾಮತ್ ಆಗ್ರಹ

ಮುಡಾ ವತಿಯಿಂದಲೇ ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ನಡೆಯಲಿ: ಶಾಸಕ ಕಾಮತ್ ಆಗ್ರಹ


ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಮೀಸಲಿಟ್ಟಿದ್ದ ೩ ಕೋಟಿ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದರಿಂದ, ಮುಡಾ ವತಿಯಿಂದಲೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಮುಡಾ ಅಧ್ಯಕ್ಷರಿಗೆ, ಆಯುಕ್ತರಿಗೆ ಪತ್ರ ಬರೆದ ಶಾಸಕರು, ದಲಿತೋದ್ಧಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ 2022ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ-1 ಮೂಲಕ 3 ಕೋಟಿ ಅನುದಾನವನ್ನು ಮಂಜೂರುಗೊಳಿಸಲಾಗಿತ್ತು. ನಂತರ ಅದರ ಗುದ್ದಲಿ ಪೂಜೆಯನ್ನೂ ಸಹ ನಡೆಸಲಾಗಿತ್ತು. ಆದರೆ ರಾಜ್ಯದಲ್ಲಿ ಸರ್ಕಾರ ಬದಲಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಈ ಅನುದಾನವನ್ನು ರದ್ದುಗೊಳಿಸಿರುವುದು ಖಂಡನೀಯ ಹಾಗೂ ಬೇಸರದ ಸಂಗತಿ. 

ಅಲ್ಲದೇ ಪ್ರಸ್ತುತ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಯಾವುದೇ ಹೊಸ ಅನುದಾನವೂ ನೀಡುತ್ತಿಲ್ಲ. ಪರಿಶಿಷ್ಟ ವರ್ಗದ ಬಂಧುಗಳಿಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದ ಆ ಮಹಾತ್ಮರ ಸಮಾಧಿಯ ಅಭಿವೃದ್ಧಿಗೆ ಹಿನ್ನಡೆಯಾಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ಕೂಡಲೇ ಮುಡಾ ವತಿಯಿಂದಲೇ 3 ಕೋಟಿ ಅನುದಾನವನ್ನು ಹೊಂದಿಸಿಕೊಂಡು ಯೋಜನೆ ಪೂರ್ಣಗೊಳಿಸುವಂತೆ ಶಾಸಕರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article