ಜುಲೈ 10 ಮತ್ತು 11ರಂದು ಆಳ್ವಾಸ್ ನಲ್ಲಿ 'ಕನ್ನಡ ಗಾನ ಗುಚ್ಛ'
Thursday, July 9, 2026
ಮೂಡುಬಿದಿರೆ: ಜುಲೈ 10 ಮತ್ತು 11 ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಸಂಜೆ 6.30 ಕ್ಕೆ ವೈವಿದ್ಯಮಯ ಹಾಡುಗಳ 'ಕನ್ನಡ ಗಾನ ಗುಚ್ಛ' ಎಂಬ ವಿನೂತನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಪ್ರಸ್ತುತ ಪಡಿಸುವ ಈ ಗಾನ ಗುಚ್ಛವನ್ನು ರಂಗನಿರ್ದೇಶಕ ಡಾ| ಜೀವನ್ ರಾಂ ಸುಳ್ಯ ಸಂಯೋಜಿಸಿದ್ದಾರೆ. ಕನ್ನಡದ ವಿವಿಧ ಪ್ರಾಕಾರಗಳ ವೈವಿಧ್ಯಮಯ ಹಾಡುಗಳನ್ನು ರಂಗಸಾಧ್ಯತೆಗಳ ಮೂಲಕ ಪ್ರಸ್ತುತಪಡಿಸುವ ಎರಡು ಗಂಟೆಗಳ ವಿಶೇಷ ಕಾರ್ಯಕ್ರಮ ಇದಾಗಿದ್ದು ತಂಡದಲ್ಲಿ ಡಾ| ಜೀವನ್ ರಾಂ ಸುಳ್ಯ, ಮಮತಾ ಕಲ್ಮಕಾರು, ಮನುಜ ನೇಹಿಗ ಸುಳ್ಯ, ಸಮನ್ವಿತ ಹುಬ್ಬಳ್ಳಿ, ಸತ್ಯಜಿತ್ ರಾವ್, ಸತೀಶ್ ಸುರತ್ಕಲ್, ಸಂತೋಷ್ ಉಡುಪಿ, ತೇಜಸ್ವಿನಿ ತರೀಕೆರೆ, ನಿಶ್ಮಿತಾ ಬೆಂಗಳೂರು, ವಿಸ್ಮಯ ಪೈ, ಸಿಂಚನಾ ಶೆಟ್ಟಿ ಹಾಗೂ ಕೃಪಾ ನಾಯಕ್ ಉಂತಾದವರು ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮ ಇರುವುದಿಲ್ಲ ಮತ್ತು ಕಾರ್ಯಕ್ರಮ ಸಮಯಕ್ಕೆ ಸರಿಯಾಗಿ ಆರಂಭವಾಗಲಿದೆ ಎಂದು ಆಳ್ವರು ತಿಳಿಸಿದ್ದಾರೆ.