ರಸ್ತೆ ಬದಿ ಕಸ ಸುರಿಯುತ್ತಿದ್ದ ವಾಹನದ ಮಾಲೀಕನಿಗೆ ರೂ.1,500 ದಂಡ ವಿಧಿಸಿದ ಹೊಸಬೆಟ್ಟು ಪಿಡಿಒ

ರಸ್ತೆ ಬದಿ ಕಸ ಸುರಿಯುತ್ತಿದ್ದ ವಾಹನದ ಮಾಲೀಕನಿಗೆ ರೂ.1,500 ದಂಡ ವಿಧಿಸಿದ ಹೊಸಬೆಟ್ಟು ಪಿಡಿಒ


ಮೂಡುಬಿದಿರೆ: ರಸ್ತೆ ಬದಿಯಲ್ಲಿ ಅಕ್ರಮವಾಗಿ ಕಸ ಸುರಿಯುತ್ತಿದ್ದ ವಾಹನದ ಮಾಲೀಕನಿಗೆ ಹೊಸಬೆಟ್ಟು ಗ್ರಾಮ ಪಂಚಾಯತ್  ₹1,5,00 ದಂಡ ವಿಧಿಸಿದೆ.

ಹೊಸಬೆಟ್ಟು ಗ್ರಾಮ ಪಂಚಾಯತ್ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ  ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ   ಪಂಚಾಯತ್ ಪಿಡಿಓ ಸವಿತಾ ಅವರು ಸ್ಥಳ ಪರಿಶೀಲನೆ ನಡೆಸಿದ ವೇಳೆ ರಸ್ತೆ ಬದಿಯಲ್ಲಿ ಕಸ ಸುರಿಯುತ್ತಿರುವುದು ಕಂಡು ಬಂದಿದೆ. ತಕ್ಷಣವೇ KA 19 AA 8030 ಸಂಖ್ಯೆಯ ಟೆಂಪೋ ವಾಹನದ ಮಾಲೀಕನ ವಿರುದ್ಧ ಕ್ರಮ ಕೈಗೊಂಡು ₹1,5,00 ದಂಡ ವಿಧಿಸಿ ಎಚ್ಚರಿಕೆಯನ್ನು ನೀಡಿದ್ದಾರೆ. 

ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಸುರಿಯದೇ, ನಿಗದಿತ ಸ್ಥಳದಲ್ಲೇ ತ್ಯಾಜ್ಯ ವಿಲೇವಾರಿ ಮಾಡುವಂತೆ ಪಂಚಾಯತ್ ಮನವಿ ಮಾಡಿದೆ. ಇಂತಹ ಉಲ್ಲಂಘನೆಗಳು ಮುಂದುವರಿದರೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ‌ ಸಂದಭ೯ ಗ್ರಾಮ ನೈರ್ಮಲ್ಯ ಸದಸ್ಯರು, ಸಾರ್ವಜನಿಕರು ಸಹಕಾರ ನೀಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article