ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಲೋಕಾಪ೯ಣೆ
ಐಬಿಎಂ ಇಂಡಿಯಾದ ವಾಟ್ಸನ್‌ಎಕ್ಸ್ ಎಐ ವಿಭಾಗದ ನಿದೇ೯ಶಕ ಹಾಗೂ ಮುಖ್ಯಸ್ಥ ರತೀಶ್ ಮುರಳೀಧರನ್ ಮಾತನಾಡಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಸ್ಥಾಪಿಸಿದ ಎಂಜಿನಿಯರಿಂಗ್ ಕಾಲೇಜಾಗಿ ಹೊಸ ಮೈಲಿಗಲ್ಲು ನರ‍್ಮಿಸಿದೆ. ಎಐ ತಂತ್ರಜ್ಞಾನವು ಶಕ್ತಿಯುತ ಸಾಧನಗಳನ್ನು ಎಲ್ಲರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡಿ ಜ್ಞಾನವನ್ನು ವ್ಯಾಪಕವಾಗಿ ತಲುಪಿಸಿದೆ. ಆದರೆ ಭವಿಷ್ಯದಲ್ಲಿ ಯಶಸ್ಸು ತಂತ್ರಜ್ಞಾನದಿಂದ ಮಾತ್ರ ನಿಧಾ೯ರವಾಗುವುದಿಲ್ಲ; ಕಲಿಯುವ ಆಸಕ್ತಿ, ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾರ‍್ಥ್ಯ ಮತ್ತು ಸಮಾಜಕ್ಕೆ ಉಪಯುಕ್ತ ಪರಿಹಾರಗಳನ್ನು ಕಂಡುಹಿಡಿಯುವ ಮನೋಭಾವವೂ ಮುಖ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕೃತಕ ಬುದ್ಧಿಮತ್ತೆಯನ್ನು ಮಾನವ ಸಾರ‍್ಥ್ಯವನ್ನು ವೃದ್ಧಿಸುವ ಸಾಧನವಾಗಿ ನೋಡಬೇಕು, ಅದು ಮಾನವನನ್ನು ಬದಲಿಸುವ ತಂತ್ರಜ್ಞಾನವಲ್ಲ. “ಮಾನವೀಯ ಸಾಮಾನ್ಯ ಜ್ಞಾನ ಮತ್ತು ಎಐ ಒಂದಾದಾಗ ವಿಶ್ವಕ್ಕೆ ಅತ್ಯುತ್ತಮ ಪರಿಹಾರಗಳನ್ನು ನೀಡಬಹುದು ಎಂದರು.
ಉದ್ಯಮ–ಶೈಕ್ಷಣಿಕ ಸಹಯೋಗವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ವಿದ್ಯರ‍್ಥಿಗಳಿಗೆ ಉನ್ನತ ಮಟ್ಟದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳ ನೇರ ಪ್ರಾಯೋಗಿಕ ಅನುಭವ ಕಲ್ಪಿಸಲು ಈ ಲ್ಯಾಬ್ ಸ್ಥಾಪಿಸಲಾಗಿದೆ. ಐಬಿಎಂ ವಾಟ್ಸನ್‌ಎಕ್ಸ್.ಎಐ, ವಾಟ್ಸನ್‌ಎಕ್ಸ್ ರ‍್ಕೆಸ್ಟ್ರೇಟ್ ಹಾಗೂ ಎಐ ಆಧಾರಿತ ಡೆವಲಪರ್ ಉಪಕರಣಗಳಿಂದ ಸಜ್ಜುಗೊಂಡಿರುವ ಈ ಲ್ಯಾಬ್, ವಿದ್ಯರ‍್ಥಿಗಳು ಮತ್ತು ಅಧ್ಯಾಪಕರಿಗೆ ಎಂಟರ್‌ಪ್ರೈಸ್ ಎಐ ವೇದಿಕೆಗಳು ಹಾಗೂ ನೈಜ ಕೈಗಾರಿಕಾ ಅನ್ವಯಿಕೆಗಳ ಕುರಿತು ನೇರ ಅನುಭವ ನೀಡಲಿದೆ.
ಈ ಐಬಿಎಂ ಎಐ ಲ್ಯಾಬ್ ಮುಂದಿನ ದಿನಗಳಲ್ಲಿ ನವೀನತೆ, ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿಗೆ ಕೇಂದ್ರವಾಗಿದ್ದು, ವಿದ್ಯರ‍್ಥಿಗಳನ್ನು ಎಐ ಆಧಾರಿತ ಭವಿಷ್ಯದ ಉದ್ಯೋಗಗಳಿಗೆ ಸಜ್ಜುಗೊಳಿಸುವ ಪ್ರಮುಖ ವೇದಿಕೆಯಾಗಲಿದೆ ಎಂದರು.
ಈ ಸಂದಭ೯ದಲ್ಲಿ ಎಐಇಟಿಯ ಹಿರಿಯ ವಿದ್ಯರ‍್ಥಿ ಹಾಗೂ ಪ್ರಸ್ತುತ ಐಬಿಎಂ ಇಂಡಿಯಾದ ಎಐ ತಜ್ಞ ಮನೋಜ್ ಬಿ. ಶೆಟ್ಟಿ ವಿದ್ಯಾಥಿ೯ ಮಾಗ೯ದಶ೯ನ ನೀಡಿದರು.
ಎಐಇಟಿ ಪ್ರಾಂಶುಪಾಲ ಡಾ. ಪೀಟರ್ ಫೆನಾ೯ಂಡಿಸ್, ಅಧ್ಯಾಪಕರು, ವಿದ್ಯರ‍್ಥಿಗಳು ಹಾಗೂ ಐಬಿಎಂ ಸಾಫ್ಟವೆರ್ ಲ್ಯಾಬ್ಸ್ ನಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೊಠಾರಿ ಸ್ವಾಗತಿಸಿ, ರಕ್ಷಿತಾ ರೈ ಕರ‍್ಯಕ್ರಮ ನಿರೂಪಿಸಿ, ಸಂಪತ್ ಶೆಟ್ಟಿ ವಂದಿಸಿದರು.