ಶ್ರೀ ಮಹಾವೀಕ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ” ಬಗ್ಗೆ ಮಾಹಿತಿ

ಶ್ರೀ ಮಹಾವೀಕ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ” ಬಗ್ಗೆ ಮಾಹಿತಿ


ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮದ ಅಂಗವಾಗಿ ನಮ್ಮ ಸಹ ಸಂಸ್ಥೆಯಾದ ಎ.ಜಿ. ಸೋನ್ಸ್ ಐ.ಟಿ.ಐ. ಯ ಹಿರಿಯ ಉಪನ್ಯಾಸಕರಾದ ಶಿವಪ್ರಸಾದ ಹೆಗ್ಡೆಯವರು “ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ” ಬಗ್ಗೆ ಮಾಹಿತಿ ನೀಡಿದರು.

ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿರುವ ಈ ಕಾಲದಲ್ಲಿ ಪ್ರತಿಯೊಬ್ಬರು ಸಂಚಾರ ನಿಯಮಗಳನ್ನು ಪಾಲಿಸಬೇಕು. ಅಪಘಾತಗಳಾಗದಂತೆ ಯಾವ ರೀತಿ ಮುಂಜಾಗೃತೆ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂಬುದರ ಬಗ್ಗೆ ಕೆಲವಷ್ಟು ನೈಜ ಘಟನೆಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ವಹಿಸಿದ್ದರು.

ಕಾರ್ಯಕ್ರಮದ ಸಂಯೋಜಕಿ ದೀಕ್ಷಾ ಉಪಸ್ಥಿತರಿದ್ದರು. ಉಪನ್ಯಾಸಕಿ ಪದ್ಮಶ್ರೀ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article