ಭಾರತ್ ಸ್ಕೌಟ್ಸ್ -ಗೈಡ್ಸ್  ಸಾಂಸ್ಕೃತಿಕ ವಿನಿಮಯ ವಿಭಾಗದ ರಾಷ್ಟ್ರೀಯ ಉಪ ಕಮಿಷನರ್ ಆಗಿ ವಿವೇಕ್ ಆಳ್ವ ನೇಮಕ

ಭಾರತ್ ಸ್ಕೌಟ್ಸ್ -ಗೈಡ್ಸ್ ಸಾಂಸ್ಕೃತಿಕ ವಿನಿಮಯ ವಿಭಾಗದ ರಾಷ್ಟ್ರೀಯ ಉಪ ಕಮಿಷನರ್ ಆಗಿ ವಿವೇಕ್ ಆಳ್ವ ನೇಮಕ


ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಕಮಿಷನರ್ ಆಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅವರನ್ನು ನೇಮಕ ಮಾಡಲಾಗಿದೆ.

ಯುವ ಸಬಲೀಕರಣ ಹಾಗೂ ರಾಷ್ಟ್ರ ನಿರ್ಮಾಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಜವಾಬ್ದಾರಿ ನೀಡಲಾಗಿದೆ. ಸಾಂಸ್ಕೃತಿಕ ವಿನಿಮಯ ಚಟುವಟಿಕೆಗಳ ಸಮನ್ವಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕಾರ್ಯಕ್ರಮಗಳ ಆಯೋಜನೆ ಹಾಗೂ ವಿವಿಧ ರಾಜ್ಯಗಳ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳೊಂದಿಗೆ ಸಂಪರ್ಕ ಸಾಧಿಸುವ ಕಾರ್ಯವನ್ನು ಅವರು ನಿರ್ವಹಿಸಲಿದ್ದಾರೆ.

ವಿವೇಕ್ ಆಳ್ವ ಅವರ ನೇಮಕಕ್ಕೆ ಶಿಕ್ಷಣ, ಸ್ಕೌಟ್ಸ್ ಮತ್ತು ಗೈಡ್ಸ್ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಈ ನೇಮಕ ಮೂಡುಬಿದಿರೆಯ ಹೆಗ್ಗಳಿಕೆಗೆ ಮತ್ತೊಂದು ಗರಿ ಮೂಡಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article