ಬಲ್ಲೂರುಗುಡ್ಡೆಯ ಗುಡ್ಡೆ ಕುಸಿತದ ಅಪಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಿ
Thursday, July 2, 2026
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 52ನೇ ವಾರ್ಡ್‌ನ ಬಲ್ಲೂರುಗುಡ್ಡೆ ಪ್ರದೇಶದಲ್ಲಿ ಕಳೆದ ಸುಮಾರು 15 ವರ್ಷಗಳಿಂದ ಗುಡ್ಡೆ ಕುಸಿತದ ಅಪಾಯ ಮುಂದುವರಿದಿದ್ದು, ಮಳೆಗಾಲದಲ್ಲಿ ಸ್ಥಳೀಯ ನಿವಾಸಿಗಳು ಆತಂಕದ ವಾತಾವರಣದಲ್ಲಿ ಜೀವನ ಸಾಗಿಸುವಂತಾಗಿದೆ
ಸ್ಥಳೀಯರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳು, ಬಿಜೆಪಿ ಕಾರ್ಪೊರೇಟರ್ ಹಾಗೂ ಬಿಜೆಪಿ ಶಾಸಕರ ಗಮನಕ್ಕೆ ಈ ಸಮಸ್ಯೆಯನ್ನು ತಂದಿದ್ದರೂ, ಶಾಶ್ವತ ಪರಿಹಾರ ಕಲ್ಪಿಸುವ ಕೆಲಸಗಳು ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ
ಗುಡ್ಡೆ ಕುಸಿತದಿಂದ ಯಾವುದೇ ಅನಾಹುತ ಸಂಭವಿಸುವ ಮೊದಲು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಇಲಾಖೆಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಶಾಶ್ವತ ರಕ್ಷಣಾ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರ ಜೀವ ಮತ್ತು ಆಸ್ತಿಯನ್ನು ರಕ್ಷಿಸಬೇಕು