ಹೊಸಂಗಡಿ ನದಿಯಲ್ಲಿ ಯುವಕನ ಶವ ಪತ್ತೆ
Monday, July 13, 2026
ಮೂಡುಬಿದಿರೆ: ಹೊಸಂಗಡಿಯ ತಮ್ಮ ಮನೆಯಿಂದ ಕಳೆದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಹೊಸಂಗಡಿ ಫಲ್ಗುಣಿ ನದಿಯಲ್ಲಿ ಸೋಮವಾರ ಸಂಜೆ ಪತ್ತೆಯಾಗಿದೆ.
ಹೊಸಂಗಡಿಯ ಸೀನ ಎಂಬವರ ಪುತ್ರ ಕಿಶೋರ್ (32) ಶವವಾಗಿ ಪತ್ತೆಯಾದ ಯುವಕ.
ಕಿಶೋರ್ ನಾಲ್ಕು ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದು ನಂತರ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಇದೀಗ ಅತನ ಮೃತದೇಹವು ನದಿಯಲ್ಲಿ ಸಿಕ್ಕಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯ ವ್ಯಕ್ತ ಪಡಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.