ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಜಿಲ್ಲೆಗೆ: ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮಂಡಲಾಧ್ಯಕ್ಷ ದಿನೇಶ್ ಪುತ್ರನ್

ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಜಿಲ್ಲೆಗೆ: ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮಂಡಲಾಧ್ಯಕ್ಷ ದಿನೇಶ್ ಪುತ್ರನ್


ಮೂಡುಬಿದಿರೆ: ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಅವರು ಗುರುವಾರ ಮುಲ್ಕಿ ಮೂಡುಬಿದಿರೆ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಅವರನ್ನು ಮಂಡಲದ ಅಧ್ಯಕ್ಷರಾದ ದಿನೇಶ್ ಪುತ್ರನ್  ಹಾಗೂ  ಪ್ರಮುಖರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.


ನಂತರ ಚೌಹಾನ್ ಅವರು ಧಾಮಿ೯ಕ ಕ್ಷೇತ್ರಗಳಾದ ಪೊಳಲಿ, ಕಟೀಲು ,ಬಪ್ಪನಾಡು ಹಾಗೂ ಸಸಿಹಿತ್ಲು ದೇವಸ್ಥಾನಗಳಿಗೆ ಭೇಟಿ ನೀಡಿ ದೇವಿಯ ದಶ೯ನ ಪಡೆದುಕೊಂಡರು.

ಈ ಸಂದಭ೯ದಲ್ಲಿ ಮಂಡಲದ ಪ್ರ.ಕಾಯ೯ದಶಿ೯ಗಳಾದ ರಂಜಿತ್ ಪೂಜಾರಿ, ಹರಿಪ್ರಸಾದ್, ಯುವ ಮೋಚಾ೯ದ ಅಧ್ಯಕ್ಷ ಕುಮಾರ್ ಪ್ರಸಾದ್ ಪ್ರಮುಖರಾದ ಭುವನಾಭಿರಾಮ ಉಡುಪ, ಈಶ್ವರ್ ಕಟೀಲು, ಅಭಿಲಾಷ್ ಕಟೀಲು ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article