ವೈದ್ಯರ ದಿನಾಚರಣೆ: ಶಿರ್ತಾಡಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರಿಗೆ ಗೌರವ

ವೈದ್ಯರ ದಿನಾಚರಣೆ: ಶಿರ್ತಾಡಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರಿಗೆ ಗೌರವ


ಮೂಡುಬಿದಿರೆ: ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ  ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಬಿಂದು ಮ್ಯಾಕ್ಸಿಂ ಡಿಸೋಜ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶಿರ್ತಾಡಿಯ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ವೈದ್ಯರಿಗೆ ವೈದ್ಯರ ದಿನದ ಶುಭಾಶಯಗಳನ್ನು ಸಲ್ಲಿಸಿದರು.

ವಿದ್ಯಾರ್ಥಿಗಳು ವೈದ್ಯರಿಗೆ ಶುಭಾಶಯ ಪತ್ರಗಳು ಹಾಗೂ ಹೂಗುಚ್ಛಗಳನ್ನು ನೀಡಿ ಅವರ ನಿಸ್ವಾರ್ಥ ಸೇವೆಗೆ ಕೃತಜ್ಞತೆ ಸಲ್ಲಿಸಿದರು. ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅಮೂಲ್ಯವಾಗಿದ್ದು, ಅವರ ಸಮರ್ಪಣಾ ಮನೋಭಾವವನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳ ಈ ಭೇಟಿ ವೈದ್ಯರಿಗೆ ಸಂತಸವನ್ನುಂಟು ಮಾಡಿದ್ದು, ವೈದ್ಯರ ಸೇವೆಯ ಮಹತ್ವವನ್ನು ಮಕ್ಕಳಿಗೆ ಪರಿಚಯಿಸುವ ಉತ್ತಮ ಪ್ರಯತ್ನವಾಗಿ ಮೂಡಿಬಂತು. ಶಾಲೆಯ ಶಿಕ್ಷಕರು ಹಾಗೂ ವಿವಿಧ ಆಸ್ಪತ್ರೆಗಳ ವೈದ್ಯರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article