ಬೆಳುವಾಯಿಯ ಸ್ಪೂತಿ೯ ಭಿನ್ನ ಸಾಮಥ್ಯ೯ದ ಮಕ್ಕಳ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

ಬೆಳುವಾಯಿಯ ಸ್ಪೂತಿ೯ ಭಿನ್ನ ಸಾಮಥ್ಯ೯ದ ಮಕ್ಕಳ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ


ಮೂಡುಬಿದಿರೆ: ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯಲ್ಲಿ 2026-27 ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಮಹಾಸಭೆ ಗುರುವಾರ ನಡೆಯಿತು. 

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮೌಂಟ್ ರೋಸರಿ ಆಸ್ಪತ್ರೆಯ ಮೆಡಿಕಲ್ ಸೋಶಿಯಲ್ ವರ್ಕರ್ & ಪಬ್ಲಿಕ್ ರಿಲೇಶನ್ ಅಧಿಕಾರಿಯಾಗಿರುವ ಡಾ. ಶುಭಕರ್ ಅಂಚನ್ ಅವರು ವಿಶೇಷ ಮಕ್ಕಳ ಪಾಲನೆ ಪೋಷಣೆಯಲ್ಲಿ ಪೋಷಕರ ಪಾತ್ರ ಎಂಬ ವಿಷಯದ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು. 

ಹೊಸ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳ ಪಟ್ಟಿ ಹಾಗೂ ಪೋಷಕ ಸಮಿತಿಯ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.

ಸಂಸ್ಥೆಯ ಸಂಸ್ಥಾಪಕರಾದ ಪ್ರಕಾಶ್ ಜೆ.ಶೆಟ್ಟಿಗಾರ್, ಪೋಷಕರ ಸಮಿತಿಯ ಅಧ್ಯಕ್ಷೆ ಲತಾ ಸುರೇಶ್, ಕಾರ್ಯದರ್ಶಿ ರಮೀಜಾ ಸಲೀಂ, ಸಂಸ್ಥೆಯ ಸಹ ಆಡಳಿತಾಧಿಕಾರಿ ಅನಿತಾ ರೋಡ್ರಿಗಸ್ ಉಪಸ್ಥಿತರಿದ್ದರು. 

ಶಾಲೆಯ ಮುಖ್ಯ ಶಿಕ್ಷಕಿ ಶರ್ಮಿಳಾ ವಾಸ್ ಸ್ವಾಗತಿಸಿದರು. ಶಿಕ್ಷಕಿ ಹರ್ಷಾ ಕಾಯ೯ಕ್ರಮ ನಿರೂಪಿಸಿ, ಲಕ್ಷ್ಮೀ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article