ನಿಡ್ಡೋಡಿಯಲ್ಲಿ ನೆಟ್ಟ ಗಿಡಗಳ ನಿರ್ವಹಣಾ ಕಾರ್ಯಕ್ರಮ
Sunday, July 19, 2026
ಮೂಡುಬಿದಿರೆ: ಸಂತ ತೆರೆಜಮ್ಮನವರ ದೇವಾಲಯ ನಿಡ್ಡೋಡಿಯಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ನಿಡ್ಡೋಡಿ ಘಟಕದ ನೇತೃತ್ವದಲ್ಲಿ ವನಮಹೋತ್ಸವ ಹಾಗೂ ನೆಟ್ಟ ಗಿಡಗಳ ನಿರ್ವಹಣಾ ಕಾರ್ಯಕ್ರಮವು ಭಾನುವಾರ ನಡೆಯಿತು.
ಚರ್ಚಿನ ಧರ್ಮಗುರುಗಳಾದ ವಂ. ಲಿಯೋ ವಿಲಿಯಂ ಲೋಬೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಚರ್ಚ್ ಪಾಲಾನಾ ಸಮಿತಿಯ ಉಪಾಧ್ಯಕ್ಷರಾದ ಶರ್ಮಿಳಾ ಸೆರಾವೊ, ಕಾರ್ಯದರ್ಶಿ ಪ್ರಿಮಾ ಕೊರೆಯಾ, ಸರ್ವ ಅಯೋಗಗಳ ಸಂಯೋಜಕರಾದ ಮ್ಯಾಕ್ಸಿಮ್ ಪಿಂಟೊ, ಕಥೊಲಿಕ್ ಸಭಾ ನಿಕಟಪೂರ್ವ ಅಧ್ಯಕ್ಷ ಕಿಶೋರ್ ಡಿಸೋಜಾ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕಥೊಲಿಕ್ ಸಭಾ ನಿಡ್ಡೋಡಿ ಘಟಕದ ಅಧ್ಯಕ್ಷೆ ಸರಿತಾ ತಾವ್ರೊ ಸ್ವಾಗತಿಸಿದರು. ಕಾರ್ಯದರ್ಶಿ ಜೀವನ್ ಕ್ರಾಸ್ತಾ ಕಾಯ೯ಕ್ರಮ ನಿರೂಪಿಸಿ, ವಂದಿಸಿದರು.
