ಮಿಜಾರು: ಮಹಿಳೆ ನೇಣು ಬಿಗಿದು ಆತ್ಮಹತ್ಯೆ
Friday, July 17, 2026
ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿನಲ್ಲಿ ಮಹಿಳೆಯೋವ೯ರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಮಿಜಾರು ಸಮೀಪದ ನಮೈಲೆ ಪ್ರದೇಶದ ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಸ್ನೇಹಾ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.