ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಚ್ ವಸಂತ ಬರ್ನಾಡ್ ನೇಮಕ

ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಚ್ ವಸಂತ ಬರ್ನಾಡ್ ನೇಮಕ


ಮೂಡುಬಿದಿರೆ: ಮುಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹೆಚ್.ವಸಂತ ಬರ್ನಾಡ್ ನೇಮಕಗೊಂಡಿದ್ದಾರೆ. 

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರ ಮಾರ್ಗದರ್ಶನಂತೆ, ಕ್ಷೇತ್ರದ ಮಾಜಿ ಸಚಿವರಾದ ಕೆ. ಅಭಯ ಚಂದ್ರ ಜೈನ್ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ  ಡೆನ್ನಿಸ್ ಡಿಸಿಲ್ವಾ ಅವರ ಶಿಫಾರಸ್ಸಿನಂತೆ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು, ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ  ವಿನಯ್ ಕುಮಾರ್ ಸೊರಕೆ ಅವರು ಶಿಫಾರಸ್ಸು ಮಾಡಿ ಆದೇಶ ಹೊರಡಿಸಿರುತ್ತಾರೆ. 

ವಸಂತ್ ಬೆನಾ೯ಡ್ ಅವರು ಕಾಲೇಜು ಜೀವನದಿಂದಲೂ  ನಾಯಕತ್ವದ ಗುಣವನ್ನು ಹೊಂದಿದವರು, ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನ ಕಾಂಗ್ರೆಸ್ ಕೋಶಾಧಿಕಾರಿಯಾಗಿ, ಜಿಲ್ಲಾ ಯುವ ಕಾಂಗ್ರೆಸ್ಸಿನ ಉಪಾಧ್ಯಕ್ಷರಾಗಿ, ಸುಮಾರು 12 ವರ್ಷ ನಿರಂತರವಾಗಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ತಾಲೂಕು ರಾಜೀವ್ ಗಾಂಧಿ ಪಂಚಾಯತ್ ಸಂಘಟನ್ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಯ ಕೋ ಆರ್ಡಿನೇಟರ್ ಆಗಿ ಕುಂದಾಪುರ ಕ್ಷೇತ್ರದ ಕೋಟ  ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ, ಪ್ರಸ್ತುತ ಕೆಪಿಸಿಸಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿ ನಡೆದ ವಿವಿಧ ಉಪ ಚುನಾವಣೆಯಲ್ಲಿ ಸಹಾಯಕ ವೀಕ್ಷಕರಾಗಿ ಸೇವೆ ಸಲ್ಲಿಸಿದ ಅನುಭವ ಇವರದ್ದು.

ಮುಲ್ಕಿ ಮೂಡುಬಿದಿರೆ ಕ್ಷೇತ್ರದಲ್ಲಿ ನಡೆದ ಚುನಾವಣೆ ಗಳಲ್ಲಿ ಚುನಾವಣೆಯ ಕಂಟ್ರೋಲ್ ರೂಮಿನ ಜವಾಬ್ದಾರಿಯನ್ನು ಹೊತ್ತುಕೊಂಡು ಚುನಾವಣೆ ಪ್ರಕ್ರಿಯೆಗಳನ್ನು ಸುಸೂತ್ರವಾಗಿ ನಡೆಸಿದ ಅನುಭವ ಇವರದ್ದು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article