ಮಯೂರಿ ಜ್ಞಾನವಿಕಾಸ ಕೇಂದ್ರದ ಎರಡನೇ ವಷ೯ದ ವಾರ್ಷಿಕೋತ್ಸವ: ಸನ್ಮಾನ
ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ವಾಸುದೇವ ನಾಯಕ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಯೋಜನೆಯ ಕಾರ್ಯಕ್ರಮ, ಜ್ಞಾನವಿಕಾಸ ಕಾರ್ಯಕ್ರಮಗಳು ಮೌಲ್ಯಯುತವಾದದು ಇದನ್ನು ಜೀವನದಲ್ಲಿ ಅಳವಡಿಸಬೇಕು ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.
ಒಕ್ಕೂಟದ ಅಧ್ಯಕ್ಷ ಪ್ರಕಾಶ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಯಾದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಶಿಧರ್ ಪಿ ನಾಯಕ್ ಅವರು ಜ್ಞಾನವಿಕಾಸ ಕಾರ್ಯಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು.
ತಾಲೂಕಿನ ಯೋಜನಾಧಿಕಾರಿ ಧನಂಜಯ, ಜ್ಞಾನವಿಕಾಸದ ಹುಟ್ಟು ಜ್ಞಾನವಿಕಾಸದಲ್ಲಿ ಮಹಿಳೆಯರಿಗಾಗಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.
ಜ್ಞಾನವಿಕಾಸದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಿರ್ದೇಶನ ನೀಡುತ್ತಿರುವ ನಲಿಕೆ ಸಮುದಾಯ ಸಂಘದ ಜಿಲ್ಲಾ ಪದಾಧಿಕಾರಿಯಾದ ಸುರೇಶ್ ಅವರನ್ನು ಗುರುತಿಸಿ ಸನ್ಮಾನಿಸಲಾಯಿತು.
ಆಟೋಟ ಸ್ಪರ್ಧೆ ನಡೆಸಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಸಲಾಯಿತು ಹಾಗೂ ಸಾಂಸ್ಕೃತಿಕ ನೃತ್ಯ, ಹಾಡು ನಡೆಸಲಾಯಿತು.
ವಲಯದ ಮೇಲ್ವಿಚಾರಕರಾದ ಚಂದ್ರಹಾಸ್ ಸ್ವಾಗತಿಸಿದರು. ಕೇಂದ್ರದ ಸದಸ್ಯೆ ಚಿತ್ರಕ್ಷಿ ವರದಿ ಮಂಡಿಸಿದರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ವಿನುತಾ ಕಾಯ೯ಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಸಂದ್ಯಾ ವಂದಿಸಿದರು.