ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಿದ ಶಿಕ್ಷಕರನ್ನು ಗೌರವಿಸಿ: ವಿವೇಕ್ ಆಳ್ವ

ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಿದ ಶಿಕ್ಷಕರನ್ನು ಗೌರವಿಸಿ: ವಿವೇಕ್ ಆಳ್ವ


ಮೂಡುಬಿದಿರೆ: ಈ ಆಧುನಿಕ ಜೀವನದಲ್ಲಿ ದೊರೆಯುವ ಎಲ್ಲಾ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ದೇಶವನ್ನು ಕಟ್ಟುವಲ್ಲಿ ವಿದ್ಯಾರ್ಥಿಗಳು ಮಹತ್ವದ ಕೊಡುಗೆಯನ್ನು ನೀಡಬೇಕು ಮತ್ತು  ತಮ್ಮ ಜೀವನ ಉಜ್ವಲಗೊಳ್ಳಲು ಕಾರಣೀಕರ್ತರಾದ ಶಿಕ್ಷಕರನ್ನು ಪ್ರೀತಿಸಿ ಹಾಗೂ ಗೌರವಿಸಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. 

ಅವರು ಜೈನ ಪದವಿಪೂರ್ವ ಕಾಲೇಜು ಮೂಡುಬಿದಿರೆ ಇದರ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. 

ಕಾಲೇಜಿನ ಪ್ರಾಚಾರ್ಯ ಡಾ. ಪ್ರಭಾತ್ ಬಲ್ನಾಡ್ ಸ್ವಾಗತಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು. 

ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ರಶ್ಮಿನ್ ಖಾನ್   ಪದಾಧಿಕಾರಿಗಳನ್ನು ಪರಿಚಯಿಸಿದರು. ದಿಗಂಬರ ಜೈನ ವಿದ್ಯಾವರ್ಧಕ ಸಂಘದ ವತಿಯಿಂದ 2025-26 ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯ ಸಂಚಾಲಕರು ಹಾಗೂ ಕಾರ್ಯಕ್ರಮದ ಅಧ್ಯಕ್ಷರಾಗಿರುವ  ಕೆ. ಹೇಮರಾಜ್ ಅವರು ಸಾಧಕ ವಿದ್ಯಾರ್ಥಿಗಳನ್ನು ನಗದು ಪುರಸ್ಕಾರದೊಂದಿಗೆ ಅಭಿನಂದಿಸಿದರು. 

ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮಂಥನ್ ಬಿ ಶೆಟ್ಟಿ ಹಾಗೂ   ಕಾರ್ಯದರ್ಶಿ  ಶ್ರಾವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ಮಾರ್ಗದರ್ಶಕ ಉಪನ್ಯಾಸಕ ರಾಮಚಂದ್ರ ಭಟ್ ಅವರು ಅಭಿನಂದನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಆಶಿಕಾ ಉದ್ಘಾಟಕರನ್ನು ಪರಿಚಯಿಸಿದರು. ಸಾನಿಕಾ ಆಳ್ವ ಹಾಗೂ ಅನನ್ಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ  ಪಿ.ಕೆ. ಯತೀಶ್  ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article