ಮೂಡುಬಿದಿರೆಯಲ್ಲಿ ಪತ್ರಿಕಾ ದಿನಾಚರಣೆ 'ಮಾಧ್ಯಮ ಹಬ್ಬ': ವೀಡಿಯೋ ಜನ೯ಲಿಸ್ಟ್ ನವೀನ್ ಸುವಣ೯ಗೆ ಸನ್ಮಾನ, ಸಾಧಕ ವಿದ್ಯಾಥಿ೯ಗಳಿಗೆ ಗೌರವ

ಮೂಡುಬಿದಿರೆಯಲ್ಲಿ ಪತ್ರಿಕಾ ದಿನಾಚರಣೆ 'ಮಾಧ್ಯಮ ಹಬ್ಬ': ವೀಡಿಯೋ ಜನ೯ಲಿಸ್ಟ್ ನವೀನ್ ಸುವಣ೯ಗೆ ಸನ್ಮಾನ, ಸಾಧಕ ವಿದ್ಯಾಥಿ೯ಗಳಿಗೆ ಗೌರವ


ಮೂಡುಬಿದಿರೆ: ಪತ್ರಿಕಾ ದಿನಾಚರಣೆಯ ಅಂಗವಾಗಿ ಮೂಡುಬಿದಿರೆ ಪ್ರೆಸ್ ಕ್ಲಬ್ ಮತ್ತು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ‘ಮಾಧ್ಯಮ ಹಬ್ಬ’ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಯಿತು. 


ಮಾಜಿ ಸಚಿವ ಕೆ.ಅಭಯಚಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. 

ಗೌರವ: 


ಪ್ರೆಸ್ ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾಯ೯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಯ೯ಕ್ರಮದಲ್ಲಿ  ಟಿವಿ 9 ಮಡಿಕೇರಿಯ ವೀಡಿಯೋ ಜರ್ನಲಿಸ್ಟ್ ,ಮೂಡುಬಿದಿರೆ ಬಿರಾವಿನ ನವೀನ್ ಸುವರ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: 

ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳನ್ನು ಗಳಿಸಿದ ಸನ್ಮತ್ ಎಸ್.ಆಚಾರ್ಯ ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ ಅಧಿಕ ಅಂಕಗಳನ್ನು ಗಳಿಸಿದ ಅಮೋಘ್ ಹೆಗ್ಡೆ ಅವರನ್ನು  ಸನ್ಮಾನಿಸಲಾಯಿತು.

ಮಂಗಳೂರಿನ ಫೊರೆನ್ಸಿಕ್ ಇನ್ವೆಸ್ಟಿಗೇಟರ್ ಶ್ರವಣ್ ಕುಮಾರ್ ಯು.ಕೆ.ಅವರು ‘ಎ.ಐ.ಯಿಂದ ಪತ್ರಕರ್ತರಿಗಿರುವ ಅವಕಾಶಗಳು ಮತ್ತು ಸವಾಲುಗಳು’ ಎನ್ನುವ ವಿಷಯದಲ್ಲಿ ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆಕಟ್ಟೆ ಪ್ರಾಯೋಜಿತ ದತ್ತಿನಿಧಿ ಉಪನ್ಯಾಸದಲ್ಲಿ ಮಾತನಾಡಿದರು.

ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ರಾಜ್ಯ ಪತ್ರಕರ್ತರ ಸಂಘದ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ಬಿಜೆಪಿ ಮುಖಂಡ ಸುದರ್ಶನ ಎಂ.ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ನವೀನ್ ಸಾಲ್ಯಾನ್ ಸ್ವಾಗತಿಸಿ  ಕೋಶಾಧಿಕಾರಿ ಪ್ರಸನ್ನ ಹೆಗ್ಡೆ ಸನ್ಮಾನಪತ್ರ ವಾಚಿಸಿದರು. ಅಶ್ರಫ್ ವಾಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಪ್ರೆಸ್ ಕ್ಲಬ್ ಉಪಾಧ್ಯಕ್ಷ ಹರೀಶ್ ಕೆ.ಆದೂರು ವಂದಿಸಿದರು.

ಪ್ರೆಸ್ ಕ್ಲಬ್ ಕಾರ್ಯದರ್ಶಿ ಪ್ರೇಮಶ್ರೀ,  ಕಾಯ೯ನಿರತ ಪತ್ರಕತ೯ರ ಸಂಘದ ಜೈಸನ್ ತಾಕೊಡೆ, ಸದಸ್ಯರಾದ ಯಶೋಧರ ಬಂಗೇರ,ರಾಘವೇಂದ್ರ ಶೆಟ್ಟಿ, ಶರತ್ ದೇವಾಡಿಗ, ಪುನೀತ್,ಪ್ರೆಸ್ ಕ್ಲಬ್ ನಿರ್ವಾಹಕ ಪ್ರಸನ್ನ ಸಚ್ಚರಿಪೇಟೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article