ದೇವರಿಗೆ ಪ್ರಿಯವಾದ ಸೇವೆಯಲ್ಲಿ ಸಮಧಾನ ಪ್ರಾಪ್ತಿ: ವಿನ್ಸೆಂಟ್ ಡಿಸೋಜ
ಮೂಡುಬಿದಿರೆ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ
ಲಯನ್ಸ್ ಜಿಲ್ಲಾ ಜಿ ಎಲ್ ಟಿ ಸಂಯೋಜಕ ಲ. ಓಸ್ವಾಲ್ಡ್ ಡಿಸೋಜ ಪದಗ್ರಹಣ ನೆರವೇರಿಸಿ ಮಾತನಾಡಿ ಒಂದು ಸಂಸ್ಥೆ 50 ವರ್ಷ ಪೂರೈಸುವುದು ಸಾಮಾನ್ಯ ಸಾಧನೆಯಲ್ಲ. ಸೇವೆಯ ಸುದೀರ್ಘ ಪರಂಪರೆಯನ್ನು ಸುವರ್ಣಾಕ್ಷರದಲ್ಲಿ ಬರೆದ ಮೂಡುಬಿದಿರೆ ಲಯನ್ಸ್ ಕ್ಲಬ್‌ನ ಸರ್ವ ಸದಸ್ಯರೂ ಪ್ರಶಂಸೆಗೆ ಅರ್ಹರಾಗಿದ್ದಾರೆ ಎಂದರು.
ಕ್ಲಬ್‌ನ ನಿರ್ಗಮನ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ ಮಾತನಾಡಿ ತಮ್ಮ ಅಧ್ಯಕ್ಷತೆಯ 50ನೇ ವರ್ಷವನ್ನು ಸ್ಮರಣೀಯವಾಗಿಸಲು ಸಭಾಭವನ ನಿರ್ಮಾಣದ ಏಕ ಕಾರ್ಯಸೂಚಿಯಲ್ಲಿ ಪೂರ್ಣಗೊಳಿಸಲು ಸಹಕಾರ ನೀಡಿದ ಕ್ಲಬ್‌ನ ಸರ್ವ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.
ನೂತನ ಅಧ್ಯಕ್ಷ ರಿಚರ್ಡ್ ಖರ್ಡೋಜ ತಮ್ಮ ಅಧ್ಯಕ್ಷತೆಯಲ್ಲಿ ಕೈಗೊಳ್ಳಲಾಗುವ ಸೇವಾ ಕಾರ್ಯಗಳಿಗೆ ಸರ್ವರ ಸಹಕಾರ ಕೋರಿದರು.
ಸೇವಾ ಕಾರ್ಯಕ್ರಮದ ಅಂಗವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಮೂಡುಬಿದಿರೆ ಪರಿಸರದ ವಿದ್ಯಾರ್ಥಿಗಳಾದ ಹೋಲಿರೋಸರಿಯ ಸಮೀಕ್ಷಾ, ಬಿ.ಆರ್.ಪಿ.ಯ ಸುಧೇಶ್, ಪ್ರಾಂತ್ಯದ ಶ್ರೇಯಾ ಮತ್ತು ಜೈನ ಪ್ರೌಢಶಾಲೆಯ ಸಿಂಧೂರ ಅವರಿಗೆ ನಗದು ಪುರಸ್ಕಾರ ನೀಡಲಾಯಿತು. ಶಿವಪ್ರಸಾದ್ ಹೆಗ್ಡೆ ಪ್ರಾಯೋಜಕತ್ವದಲ್ಲಿ ಪುಟಾಣಿ ಲಿಖಿತಾ ಹಾಗೂ ಬಿ ಎಸ್ ಸಿ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಧನಸಹಾಯ, ರತ್ನಾಕರ ಎಂ. ಹೆಗ್ಡೆಯವರ ಪ್ರಾಯೋಜಕತ್ವದಲ್ಲಿ ಶ್ರಾವ್ಯಳ ಶಿಕ್ಷಣಕ್ಕೆ ಹಾಗೂ ಡಾಕಯ್ಯ ಎಂಬವರ ಮನೆ ನಿರ್ಮಾಣಕ್ಕೆ ಸಹಾಯಧನ, ವಿನೋದ್ ಡೇಸಾ ಪ್ರಾಯೋಜಕತ್ವದಲ್ಲಿ ಒಂಟಿಕಟ್ಟೆ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಜೊಸ್ಸಿ ಮಿನೇಜಸ್ ಪ್ರಾಯೋಜಕತ್ವದಲ್ಲಿ ಬೆಳ್ತಂಗಡಿ ಸಿಯೋನ್ ಆಶ್ರಮಕ್ಕೆ ಸಹಾಯಧನ ವಿತರಿಸಲಾಯಿತು. ಮೂಡುಬಿದಿರೆಯ ವಿವಿಧ ಶಾಲೆಗಳಿಗೆ 1.50 ಲಕ್ಷ ವೆಚ್ಚದಲ್ಲಿ ಉಚಿತ ಪುಸ್ತಕ ವಿತರಣೆ ಮಾಡಿದ ಕೆ. ಶ್ರೀಪತಿ ಭಟ್ ಅವರನ್ನು ಅಭಿನಂದಿಸಲಾಯಿತು.
ಲಯನ್ಸ್ ಜಿಲ್ಲಾ ಉಪ ರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ಮಾಜಿ ರಾಜ್ಯಪಾಲ ಮೆಲ್ವಿನ್ ಡಿಸೋಜ, ಪ್ರಾಂತೀಯ ಅಧ್ಯಕ್ಷ ಎಂ.ಕೆ. ದಿನೇಶ್, ವಲಯಾಧ್ಯಕ್ಷ ದೇವುದಾಸ ಹಿಬರೋಡಿ, ಲಿಯೋ ನೂತನ ಅಧ್ಯಕ್ಷೆ ಶಿವಾನಿ, ನಿರ್ಗಮನ ಅಧ್ಯಕ್ಷ ಪ್ರಖ್ಯಾತ್ ಹೆಗ್ಡೆ ಮಾತನಾಡಿದರು.
ಕ್ಲಬ್‌ನ ಪ್ರಥಮ ಮಹಿಳೆ ಪ್ರಮೀಳಾ ಕರ್ಡೋಜ, ಲಯನ್ಸ್ ಪದಾಧಿಕಾರಿಗಳಾದ ಓಸ್ವಾಲ್ಡ್ ಡಿಕೋಸ್ತ, ಹರೀಶ್ ತಂತ್ರಿ, ಹರ್ಷ, ಅರುಣ್ ಡಿಸಿಲ್ವ, ವಲಯ ಪ್ರತಿನಿಧಿ ಜೆಸಿಂತಾ ಡಿಮೆಲ್ಲೋ, ಲಿಯೋ ಪದಾಧಿಕಾರಿಗಳಾದ ಸ್ವಯಂ ಎಸ್. ಪೂಜಾರಿ, ಶಶಾಂಕ್, ರಾಹುಲ್ ಹೆಗ್ಡೆ, ವ್ಯಾಲೆನ್ಸ್ ಮೆಂಡೋನ್ಸಾ ಉಪಸ್ಥಿತರಿದ್ದರು.
ಶಿವಪ್ರಸಾದ್ ಹೆಗ್ಡೆ ಸ್ವಾಗತಿಸಿದರು. ನವಾನಂದ ಧ್ವಜವಂದನೆ ನೆರವೇರಿಸಿದರು. ಕು. ಹಿಮಾಂಶಿ ಪ್ರಾರ್ಥಿಸಿದರು. ರೊನಾಲ್ಡ್ ಸೆರಾವೊ ನೀತಿ ಸಂಹಿತೆ ಪಠಿಸಿದರು. ಓಸ್ವಾಲ್ಡ್ ಡಿಕೋಸ್ತ ಪದಗ್ರಹಣ ಅಧಿಕಾರಿಯನ್ನು ಪರುಚಯಿಸಿದರು. ವಲೇರಿಯನ್ ಸಿಕ್ವೇರಾ ಮತ್ತು ಸ್ವಯಂ ಎಸ್. ಪೂಜಾರಿ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಆಂಡ್ರ್ಯೂ ಡಿಸೋಜ, ಆಲ್ವಿನ್ ಮಿನೇಜಸ್ ಮತ್ತು ಹರೀಶ್ ತಂತ್ರಿ ನೂತನ ಸದಸ್ಯರನ್ನು ಪರಿಚಯಿಸಿದರು. ದಯಾನಂದ ನಿರೂಪಿಸಿದ ಕಾರ್ಯಕ್ರಮದಲ್ಲಿ ಹರ್ಷ ವಂದಿಸಿದರು.

