ಸಂತ ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಬ್ಲೋಸ್ಸಮ್-2026’ ಪ್ರತಿಭಾ ದಿನ ಕಾರ್ಯಕ್ರಮ
Wednesday, July 29, 2026
ಪುತ್ತೂರು: ಸಂತ ಫಿಲೋಮಿನಾ ಪ.ಪೂ ಕಾಲೇಜು ಹಾಗೂ ಲಲಿತ ಕಲಾ ಸಂಘದ ಆಶ್ರಯದಲ್ಲಿ ಜೂ.29 ರಂದು ‘ಫಿಲೋ ಬ್ಲೋಸ್ಸಮ್-2026’ ಪ್ರತಿಭಾ ದಿನ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಫಿಲೋ ಬ್ಲೋಸ್ಸಮ್ ಎನ್ನುವ ಕಾರ್ಯಕ್ರಮ ನಮ್ಮ ವಾರ್ಷಿಕ ಪ್ರತಿಭಾ ದಿನಾಚಾರಣೆಯಾಗಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯ ಅನಾವರಣಕ್ಕೆ ಒಂದು ಉತ್ತಮ ವೇದಿಕೆಯಾಗಿದೆ. ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಪ್ರತಿಭಾ ಪ್ರದರ್ಶನವನ್ನು ಮಾಡಬೇಕು. ಮಕ್ಕಳ ಪ್ರತಿಭೆಗೆ ಪ್ರೋತ್ಸಾಹದ ಅಗತ್ಯತೆ ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತೀರ್ಪುಗಾರರಾಗಿ ಪುತ್ತೂರಿನ ಸಂಗೀತ ಕಲಾವಿದರಾದ ಡಾ. ವಿದುಷಿ ಪವಿತ್ರ ರೂಪೇಶ್, ಪದವಿ ಕಾಲೇಜಿನ ಉಪನ್ಯಾಸಕ ಡಾ. ಡಿಂಪಲ್ ಜೆನಿಫರ್ ಫೆರ್ನಾಂಡಿಸ್ ಹಾಗೂ ಭರತನಾಟ್ಯ ಕಲಾವಿದರಾದ ವಿದುಷಿ ಪೂಜಾಶ್ರೀ ಸಹಕರಿಸಿದರು. ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಥೀಮ್ ಡ್ಯಾನ್ಸ್, ದೇಶ ಭಕ್ತಿಗೀತೆ ಹಾಗೂ ಮ್ಯಾಡ್ ಆಡ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕಾಲೇಜಿನ ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಮನುಜಾ ವಂದಿಸಿದರು. ಜೆನೆವಿಯಾ ಡಿ’ಕುನ್ಹಾ ಹಾಗೂ ವಿನೋಲಾ ಅಮೀತಾ ಲೋಬೊ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.


