ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು
Sunday, July 19, 2026
ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತಿಂಗಳ ಕಾಲ ಜೀವನ್ಮರಣ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಯಲ್ಲಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಂಭವಿಸಿದೆ.
ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕ ನಿವಾಸಿ ದಿ.ಹೆಗ್ಗಡೇಶ ಗೌಡ ಅವರ ಪುತ್ರಿ ಪ್ರಜ್ಞಾ (26) ಮೃತಪಟ್ಟವರು.
ಆರೋಗ್ಯ ಇಲಾಖೆಯಲ್ಲಿ ಬಡಗನ್ನೂರು ಗ್ರಾ.ಪಂ. ವ್ಯಾಪ್ತಿಯ ಸಮುದಾಯ ಆರೋಗ್ಯಾಧಿಕಾರಿಯಾಗಿದ್ದ ಪ್ರಜ್ಞಾ ಅವರು ಜೂ.21 ರಂದು ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕಳೆದ 27 ದಿನಗಳಿಂದ ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ ಮಾಡುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಜು. 17ರಂದು ಸಂಜೆ ಮೃತಪಟ್ಟಿದ್ದಾರೆ.
ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪುತ್ತೂರು ಗ್ರಾಮಾಂತರದ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ ಬೇಬಿ, ಸಹೋದರಿ ದೀಕ್ಷಾ ಅವರನ್ನು ಆಗಲಿದ್ದಾರೆ.