ವಿದೇಶದಲ್ಲಿ ವ್ಯಾಸಂಗ ಮತ್ತು ಉದ್ಯೋಗ ಅವಕಾಶಗಳ ಬಗ್ಗೆ ‘ಬಿಯಾಂಡ್ ಬಾರ್ಡರ್ಸ್’ ವಿಶೇಷ ಉಪನ್ಯಾಸ
ಜಾಗತಿಕ ಮಟ್ಟದಲ್ಲಿ ಯಶಸ್ಸು ಸಾಧಿಸಲು ಶೈಕ್ಷಣಿಕ ಸಾಧನೆಯ ಜೊತೆಗೆ ಸಂವಹನ ಕೌಶಲ್ಯ, ನಾಯಕತ್ವ, ಸಮಸ್ಯೆ ಪರಿಹಾರ ಸಾಮರ್ಥ್ಯ ಹಾಗೂ ನಿರಂತರ ಕಲಿಕೆಯ ಮನೋಭಾವ ಅತ್ಯಗತ್ಯ ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ, ಇಂದಿನ ಶಿಕ್ಷಣವು ವಿದ್ಯಾರ್ಥಿಗಳನ್ನು ಕೇವಲ ಪದವೀಧರರನ್ನಾಗಿ ರೂಪಿಸುವುದಲ್ಲ, ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಸಮರ್ಥ ವೃತ್ತಿಪರರನ್ನಾಗಿ ಬೆಳೆಸುವ ಜವಾಬ್ದಾರಿಯನ್ನು ಹೊಂದಿದೆ ಎಂದು ಹೇಳಿದರು.
ಜಾಗತಿಕ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಜ್ಞಾನ, ಕೌಶಲ್ಯ, ಮೌಲ್ಯಗಳು ಹಾಗೂ ಆತ್ಮವಿಶ್ವಾಸದ ಸಮನ್ವಯ ಅಗತ್ಯವಾಗಿದ್ದು, ಇಂತಹ ಮಾರ್ಗದರ್ಶನ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವಿಶಾಲ ದೃಷ್ಟಿಕೋನವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು. ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದ ಗುಣಮಟ್ಟದ ಶಿಕ್ಷಣ ಹಾಗೂ ಜಾಗತಿಕ ಅವಕಾಶಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದು ತಿಳಿಸಿದರು.
ಐಕ್ಯೂಎಸಿ ಸಂಯೋಜಕ ಡಾ. ಎಡ್ವಿನ್ ಎಸ್. ಡಿಸೋಜಾ ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಪೂಜಾಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಎಡ್ವಿನ್ ಎಸ್. ಡಿಸೋಜಾ ವಂದಿಸಿದರು.
ಕಾರ್ಯಕ್ರಮದ ಯಶಸ್ವಿ ಆಯೋಜನೆಯಲ್ಲಿ ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಡಾ. ವಿನಯಚಂದ್ರ ಹಾಗೂ ಮೌಲ್ಯಮಾಪನ ವಿಭಾಗದ ಉಪ ರಿಜಿಸ್ಟ್ರಾರ್ ಅಭಿಷೇಕ್ ಸುವರ್ಣ ಅವರು ಸಹಕರಿಸಿದರು.
ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಪನ್ಮೂಲ ವ್ಯಕ್ತಿಯೊಂದಿಗೆ ಸಂವಾದ ನಡೆಸಿ ತಮ್ಮ ಸಂದೇಹಗಳಿಗೆ ಉತ್ತರಗಳನ್ನು ಪಡೆದುಕೊಂಡರು. ಉನ್ನತ ಶಿಕ್ಷಣ ಹಾಗೂ ಜಾಗತಿಕ ವೃತ್ತಿ ಅವಕಾಶಗಳ ಕುರಿತು ವಿದ್ಯಾರ್ಥಿಗಳಲ್ಲಿ ಹೊಸ ಚಿಂತನೆ, ಸ್ಪಷ್ಟತೆ ಮತ್ತು ಆತ್ಮವಿಶ್ವಾಸವನ್ನು ಮೂಡಿಸುವಲ್ಲಿ ಈ ಕಾರ್ಯಕ್ರಮ ಪರಿಣಾಮಕಾರಿಯಾಯಿತು.
‘ವಿಶ್ವವನ್ನು ಗೆಲ್ಲುವ ಕನಸು ಕಾಣುವ ವಿದ್ಯಾರ್ಥಿಗಳನ್ನು ರೂಪಿಸುವುದು ನಮ್ಮ ಸಂಕಲ್ಪ’:

