ಜು.16 ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

ಜು.16 ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

ಉಜಿರೆ: ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜು.16 ರಿಂದ ಸೆಪ್ಟೆಂಬರ್ 17ರ ವರೆಗೆ ನಡೆಯಲಿದೆ. ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30 ರಿಂದ 8 ಗಂಟೆ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದ್ದು, ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವಾಲ್ಮೀಕಿ ವಿರಚಿತ ‘ತೊರವೆ ರಾಮಾಯಣ’ದ ವಾಚನ-ಪ್ರವಚನ ನಡೆಸಿಕೊಡುತ್ತಾರೆ.

ಶನಿವಾರ ಮತ್ತು ಭಾನುವಾರಗಳಲ್ಲಿ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು. ಜು.16 ಮತ್ತು 17 ರಂದು ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು.

ಉದ್ಘಾಟನಾ ಸಮಾರಂಭ: 

ಜು.16 ರಂದು ಸಂಜೆ 5 ಗಂಟೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಪುರಾಣ ವಾಚನ-ಪ್ರವಚನ ಸಮಿತಿಯ ಸಂಚಾಲಕ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article