ಎಸ್‌ಡಿಎಂ ಪಿಯು ಕಾಲೇಜು ವಿದ್ಯಾರ್ಥಿನಿಯ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಸಾಧನೆ
Saturday, July 4, 2026
ಉಜಿರೆ: ಉಜಿರೆಯ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಂಶುಲಾ ಶ್ರೇಷ್ಠ ಅವರು ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಮೇ 2026ರ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಪ್ರೊ. ಪ್ರಮೋದ್ ಕುಮಾರ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ಸಿಎ ವ್ಯಾಸಂಗದಲ್ಲಿಯೂ ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.