ಅಂತಾರಾಷ್ಟ್ರೀಯ ಕ್ರೀಡಾಪಟು, ಮಾಜಿ ಮೇಯರ್ ಕವಿತಾ ಸನಿಲ್ ಉಜಿರೆಗೆ ಭೇಟಿ

ಅಂತಾರಾಷ್ಟ್ರೀಯ ಕ್ರೀಡಾಪಟು, ಮಾಜಿ ಮೇಯರ್ ಕವಿತಾ ಸನಿಲ್ ಉಜಿರೆಗೆ ಭೇಟಿ


ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ, ಅಂತಾರಾಷ್ಟ್ರೀಯ ಕ್ರೀಡಾಪಟು, ಮಾಜಿ ಮೇಯರ್ ಕವಿತಾ ಸನಿಲ್ ಅವರು ಜು.19 ರಂದು ಉಜಿರೆಗೆ ಭೇಟಿ ನೀಡಿದರು.

ಉಜಿರೆ ಶಕ್ತಿ ಕೇಂದ್ರ ಬೂತ್ 101ರ ಅಧ್ಯಕ್ಷ ಸಂತೋಷ್ ಕುಮಾರ್ ಅವರ ಮನೆಗೆ ಭೇಟಿ ನೀಡಿ, ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಸೌಹಾರ್ದಯುತ ಮಾತುಕತೆ ನಡೆಸಿದರು. ಈ ಸಂಧರ್ಭದಲ್ಲಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಉಜಿರೆ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಶಕ್ತಿಕೇಂದ್ರದ ಪ್ರಮುಖರಾದ ರವಿಕುಮಾರ್ ಬರಮೇಲು, ಪಂಚಾಯತ್‌ನ ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಷಾಕಿರಣ್ ಕಾರಂತ್, ಶಶಿಕಲಾ ಡಿ. ಗೌಡ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಬೂತ್ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್, ಪಂಚಾಯತ್‌ನ ಮಾಜಿ ಸದಸ್ಯೆ ಲಕ್ಷ್ಮಿ ಹಾಗೂ ಉಜಿರೆಯ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.  

ಈ ಸಂದರ್ಭದಲ್ಲಿ ಕವಿತಾ ಸನಿಲ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article