ಚನ್ನಮ್ಮರ ನಿಧನಕ್ಕೆ ಹೆಗ್ಗಡೆ ಸಂತಾಪ
Sunday, July 19, 2026
ಉಜಿರೆ: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು.
ಅವರು ಧರ್ಮಸ್ಥಳದ ಅಪಾರ ಅಭಿಮಾನಿಯೂ ಭಕ್ತರೂ ಆಗಿದ್ದು, ಪ್ರತಿವರ್ಷವೂ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರದರ್ಶನ ಪಡೆದು ಸೇವೆ ಮಾಡುತ್ತಿದ್ದರು. ಅವರ ಮನೆದೇವರು ಕೂಡ ‘ಶಿವ’ ಆಗಿರುವುದು ಔಚಿತ್ಯಪೂರ್ಣವಾಗಿದೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ಸೂಚಿಸಿದರು.
