ಕಾರು ಢಿಕ್ಕಿ, ಪಾದಚಾರಿ ಮೃತ್ಯು

ಕಾರು ಢಿಕ್ಕಿ, ಪಾದಚಾರಿ ಮೃತ್ಯು


ಉಳ್ಳಾಲ: ಮುಡಿಪು ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾದಚಾರಿ ವ್ಯಕ್ತಿ ಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ವರದಿಯಾಗಿದೆ.

ಅಳೇಕಲ ನಿವಾಸಿ ಅಬ್ದುಲ್ ಖಾದರ್ (66) ಮೃತಪಟ್ಟವರು.

ಅವರು ಗುರುವಾರ ಸಂಜೆ ವೇಳೆ ಮುಡಿಪು ಬಳಿ ರಸ್ತೆ ದಾಟುತ್ತಿದ್ದರು ಇದೇ ವೇಳೆ ಕಾರು ಢಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಕಾರು ಚಾಲಕ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅವರು ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಂತಾಪ: ಕಾಂಗ್ರೆಸ್ ರಾಜ್ಯ ಸಮಿತಿ ಸಂಯೋಜಕ ಫಾರೂಕ್ ಉಳ್ಳಾಲ್, ಕಾಂಗ್ರೆಸ್ ಮುಖಂಡ ಮುಸ್ತಫಾ ಅಬ್ದುಲ್ಲಾ, ಉಳ್ಳಾಲ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಜಾಫರ್ ಯು.ಎನ್., ಉಳ್ಳಾಲ ನಗರ ಸಭೆ ಮಾಜಿ ಅಧ್ಯಕ್ಷ ಯು.ಎ. ಇಸ್ಮಾಯಿಲ್ ಸಂತಾಪ ಸೂಚಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article