ಬಜ್ಪೆ ಪಟ್ಟಣ ಪಂಚಾಯತ್ ಜನಪ್ರತಿನಿಧಿಳ ಪ್ರತಿಭಟನೆ

ಬಜ್ಪೆ ಪಟ್ಟಣ ಪಂಚಾಯತ್ ಜನಪ್ರತಿನಿಧಿಳ ಪ್ರತಿಭಟನೆ


ಬಜ್ಪೆ: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅವ್ಯವಸ್ಥೆ, ನಿರ್ಲಕ್ಷ್ಯತನ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಮನವಿಗಳಿಗೆ ವಿಮಾನ ನಿಲ್ದಾಣ ಪ್ರಾಧಿಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ, ಬಜ್ಪೆ ಪಟ್ಟಣ ಪಂಚಾಯತ್ ಜನಪ್ರತಿನಿಧಿಗಳು ಕೆಂಜಾರಿನಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಅವರ ಸಮ್ಮುಖದಲ್ಲಿ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದರು. 

ಪ್ರತಿಭಟನೆಯಲ್ಲಿ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈ ತಿಂಗಳ ಅಂತ್ಯದೊಳಗೆ ಈಡೇರಿಸುವು ದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಅಧಿಕಾರಿಗಳಿಂದ ಸ್ಪಷ್ಟವಾದ ಭರವಸೆ ದೊರೆತ ಹಿನ್ನೆಲೆಯಲ್ಲಿ, ಪ್ರಸ್ತುತ ಈ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಆದರೆ, ನೀಡಿರುವ ಭರವಸೆಗಳನ್ನು ನಿಗದಿತ ಅವಧಿಯೊಳಗೆ ಈಡೇರಿಸದಿದ್ದಲ್ಲಿ ಮುಂದಿನ ಹಂತದಲ್ಲಿ ಮತ್ತಷ್ಟು ತೀವ್ರವಾದ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾ ನಿರತ ಕೌನ್ಸಿಲರ್‌ಗಳು ಎಚ್ಚರಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಬಜ್ಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ, ಉಪಾಧ್ಯಕ್ಷ ಮಲ್ಲಿಕಾ ಚಂದ್ರಶೇಖರ್, ಸ್ಥಾಯಿ ಸಮಿತಿ ಅಧ್ಯಕ್ಷ ರಿತೇಶ್ ಶೆಟ್ಟಿ ಹಾಗೂ ಕೌನ್ಸಿಲರ್‌ಗಳಾದ ಸಿರಾಜ್ ಬಜ್ಪೆ, ರಾಜೇಶ್ ಅಮೀನ್, ಪದ್ಮನಾಭ, ಜಯಂತ್, ಜೇಕಬ್ ಪೆರೇರಾ, ಕಿರಣ್, ಗುಲ್ಶನ್ ಬಾನು, ಫರ್ಝಾನ, ದಿನೇಶ್, ಸುಪ್ರಿತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article