ಸೆ.19 ರಂದು ರಾಷ್ಟ್ರೀಯ ಲೋಕ ಅದಾಲತ್
ಬಂಟ್ವಾಳ: ಕರ್ನಾಟಕ ರಾಜ್ಯ ಕಾನೂನುಪ್ರಾಧಿಕಾರದ ನಿರ್ದೇಶನದಂತೆ ಸೆ.12 ರ ಬದಲು ಸೆ.19 ರಂದು ಮಧ್ಯಾಹ್ನ 2 ರಿಂದ ಸಂಜೆ 5.30 ರ ವರೆಗೆ ರಾಜ್ಯಾದಾದ್ಯಂತ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದ್ದು, ಅದರಂತೆ ಬಂಟ್ವಾಳ ನ್ಯಾಯಾಲಯದ ಅವರಣದಲ್ಲಿ ರಾಷ್ಟ್ರೀಯಲೋಕ ಅದಾಲತ್ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಈ ಲೋಕ ಅದಾಲತ್‌ನಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ದಾವಾ ಪೂರ್ವ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಆಸಕ್ತಿ ಹೊಂದಿರುವವರು ಸಂಬಂಧಪಟ್ಟ ತಾಲೂಕು ಕಾನೂನು ಸೇವೆಗಳ ಸಮಿತಿಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಗೆ ಅವಕಾಶವಿರುವ ಪ್ರಕರಣಗಳನ್ನು ಸಂಬಂಧಪಟ್ಟ ನ್ಯಾಯಾಲಯದ ಮೂಲಕ ಲೋಕ ಅದಾಲತ್‌ಗೆ ತರಬಹುದಾಗಿದೆ. ಅದೇ ರೀತಿ ವ್ಯಾಜ್ಯಪೂರ್ವ ಹಂತದಲ್ಲಿರುವ ಪ್ರಕರಣಗಳನ್ನು ಸಂಬಂಧಪಟ್ಟ ಕಾನೂನು ಸೇವೆಗಳ ಸಮಿತಿಯ ಮೂಲಕ ರಾಜಿ ಮಾಡಿಕೊಳ್ಳಲು ಅವಕಾಶವಿದೆ ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ವಕೀಲರು ಹಾಗೂ ಕಕ್ಷಿದಾರರಿಗೆ ಅನುಕೂಲವಾಗುವಂತೆ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಅವರು ಕೋರಲಾಗಿದೆ.