ತಲೆಮರೆಸಿದ್ದ ಆರೋಪಿಯ ಬಂಧನ
Sunday, August 23, 2026
ಬಂಟ್ವಾಳ: ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಬೀರ್ ಬಂಧಿತ ಆರೋಪಿಯಾಗಿದ್ದಾನೆ. ಇತನ ಇರುವಿಕೆಯ ಬಗ್ಗೆ ಖಚಿತ ವರ್ತಮಾನದ ಮೇರೆಗೆ ಚಿಕ್ಕಮಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.