ಅಪಾಯದ ಕರೆಗಂಟೆ ಬಾರಿಸಿದ ನೇತ್ರಾವತಿ: ಆಲಡ್ಕದಲ್ಲಿ ಕುಟುಂಬಗಳ ಸ್ಥಳಾಂತರ
ಪಾಣೆಮಂಗಳೂರಿನ ಆಲಡ್ಕದಲ್ಲಿ ಸುಮಾರು 15 ಕುಟುಂಬಗಳು ಅಪಾಯದಲ್ಲಿದ್ದು, ಅವರ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಶಾಸಕ ರಾಜೇಶ್ ನಾಯ್ಕ ಅವರು ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈಗಾಗಲೇ 10 ಮನೆಗಳ ಮೆಟ್ಟಿಲಿನವರೆಗೆ ನೀರು ತಲುಪಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ 15 ಮನೆಗಳ ಸದಸ್ಯರನ್ನು ಶಾಸಕ ನಾಯ್ಕ್ ಅವರು ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈಗಾಗಲೇ 10 ಮನೆಗಳ ಮೆಟ್ಟಿಲಿನವರೆಗೆ ನೀರು ತಲುಪಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ 15 ಮನೆಗಳ ಸದಸ್ಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದರ ಜೊತೆಗೆ ತಗ್ಗುಪ್ರದೇಶಗಳಾದ ಕಂಚಿಕಾರ್ ಪೇಟೆ, ಬಸ್ತಿಪಡ್ಡು, ಜಕ್ರಿಬೆಟ್ಟು, ಎಸ್.ವಿ.ಎಸ್. ಶಾಲಾ ಮೈದಾನ, ನಾವೂರ, ನಂದಾವರ ಸಹಿತ ಅನೇಕ ಕಡೆಗಳಲ್ಲಿ ನೀರು ತುಂಬಿ ಜಲಾವೃತವಾಗುತ್ತದೆ. ಹಾಗಾಗಿ ಅವರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.