ಬಂಟ್ವಾಳದಿಂದ ಉದ್ಯೋಗ ಮೇಳಕ್ಕೆ ಎರಡು ಬಸ್

ಬಂಟ್ವಾಳದಿಂದ ಉದ್ಯೋಗ ಮೇಳಕ್ಕೆ ಎರಡು ಬಸ್


ಬಂಟ್ವಾಳ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದ್ರೆ ವತಿಯಿಂದ ಶುಕ್ರವಾರ ಮತ್ತು ಶನಿವಾರ ಎರಡಿದಿನಗಳ ಆಯೋಜಿಸಲಾದ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳಿಗೆ ಬಂಟ್ವಾಳದಿಂದ ಎರಡು ಉಚಿತ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಎರಡುದಿನಗಳ ಹಿಂದೆ ಬಿ.ಸಿ.ರೋಡಿನಲ್ಲಿ ನಡೆದ ತರಬೇತಿ ಶಿಬಿರದಲ್ಲಿ ಘೋಷಿಸಿದಂತೆ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ಉದ್ಯೋಗಾಕಾಂಕ್ಷಿಗಳ ಅನುಕೂಲಕ್ಕಾಗಿ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದ್ದು, ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ಬಳಿಯಿಂದ ಬೆಳಗ್ಗೆ ಬಸ್‌ಗಳು ಹೊರಟಿತ್ತು.

ಉದ್ಯೋಗಾಕಾಂಕ್ಷಿ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಸೌಲಭ್ಯದ ಪ್ರಯೋಜನ ಪಡೆದು ಮೂಡಬಿದ್ರೆಯತ್ತ ಪ್ರಯಾಣ ಬೆಳೆಸಿದರು. ಉಚಿತ ಬಸ್ ವ್ಯವಸ್ಥೆಗೆ ಸಾರ್ವಜನಿಕರಿಂದಲು ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೂ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇದು ಅನುಕೂಲಕರವಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article