ಗ್ಯಾಸ್ ಟ್ಯಾಂಕರ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿ

ಗ್ಯಾಸ್ ಟ್ಯಾಂಕರ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿ


ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಕಡೆಗೊಳಿ ಸಮೀಪ ಎಲ್‌ಪಿಜಿ ಗ್ಯಾಸ್ ಸಾಗಾಟದ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ  ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.


ಮಂಗಳೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಗ್ಯಾಸ್ ತುಂಬಿದ್ದ ಟ್ಯಾಂಕರ್ ಡಿವೈಡರ್‌ಗೆ ಢಿಕ್ಕಿ ಹೊಡೆದ ಬಳಿಕ ಪರಿಣಾಮ ಅದರ ನಾಲ್ಕು ಚಕ್ರಗಳು ಮೇಲ್ಮಖವಾಗಿ ಪಲ್ಟಿಯಾಗಿದ್ದು, ಚಾಲಕ ಪಪ್ಪು ಚೌಹಾನ್ ಟ್ಯಾಂಕರ್‌ನೊಳಗೆ ಸಿಲುಕಿಕೊಂಡಿದ್ದರು. ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಅಲ್ಲದೆ ಅದೃಷ್ಟವಶಾತ್ ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗದಿರುವುದು ಸ್ಥಳೀಯರನ್ನು ಆತಂಕದಿಂದ ದೂರ ಮಾಡಿತ್ತು.


ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಇತರೆ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಂಟ್ವಾಳ ಟ್ರಾಫಿಕ್ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಕ್ರೇನ್ ಬಳಸಿ ಪಲ್ಟಿಯಾದ ಪಲ್ಟಿಯಾದ ಟ್ಯಾಂಕರನ್ನು ತೆರವುಗೊಳಿಸಲಾಯಿತು. ಬಳಿಕ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article