ಜ್ವರದಿಂದ ಐಟಿಐ ವಿದ್ಯಾರ್ಥಿಯ ಸಾವು

ಜ್ವರದಿಂದ ಐಟಿಐ ವಿದ್ಯಾರ್ಥಿಯ ಸಾವು


ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಐಟಿಐ ಕಾಲೇಜು ವಿದ್ಯಾರ್ಥಿ, ಬಂಟ್ವಾಳದ ಕೆಂಪುಗುಡ್ಡೆ ನಿವಾಸಿ ಆನಂದ ಅವರ ಪುತ್ರ ಹರ್ಷಿತ್ (19) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಂಗಳವಾರ ಮೃತಪಟ್ಟ ಘಟನೆ ಸಂಭವಿಸಿದೆ.

ಬಂಟ್ವಾಳದ ಐಟಿಐ ವೃತ್ತಿಪರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್ ಕಳೆದ ಐದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರೆನ್ನಲಾಗಿದೆ.

ಸ್ಥಳೀಯ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಂಡಿದ್ದರೂ ಜ್ವರ ಉಲ್ಬಣಿಸಿ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕರ ದಾಖಲಿಸಲಾಗಿತ್ತು.

ಅಲ್ಲು ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದೆ ಹರ್ಷಿತ್ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರೆನ್ನಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article