ಅಟೋರಿಕ್ಷಾ ಢಿಕ್ಕಿ: ಬೈಕ್ ಸವಾರ ಮೃತ್ಯು

ಅಟೋರಿಕ್ಷಾ ಢಿಕ್ಕಿ: ಬೈಕ್ ಸವಾರ ಮೃತ್ಯು


ಬಂಟ್ವಾಳ: ಅಟೋ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಸಮೀಪದ ಕಂದೂರು-ಪೆಲತ್ತಕಟ್ಟೆ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಮೃತ ಯುವಕನನ್ನು ಪಾಣೆಮಂಗಳೂರು ಸಮೀಪದ ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ (25) ಎಂದು ಗುರುತಿಸಲಾಗಿದೆ.

ಅವಿವಾಹಿತನಾಗಿರುವ ರಶಿಕ್ ನಂದಾವರ ಶಾಲಾ ಸಮೀಪ ಗ್ಯಾರೇಜ್ ನಡೆಸುತ್ತಿದ್ದು, ಈತ ಭಾನುವಾರ ರಾತ್ರಿ ಸಜಿಪಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆಯಲ್ಲಿ ಅಟೋ ರಿಕ್ಷಾ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಪರಿಣಾಮ ಗಂಭೀರ ಗಾಯಗೊಂಡಿದ್ದ ರಶೀಕ್‌ನನ್ನು ತಕ್ಷಣ ಸ್ಥಳೀಯರು ದೇರಳಕಟ್ಟೆಯ ಆಸ್ಪತ್ರೆಯೊಂದಕ್ಕೆ ಸಾಗಿಸಿದರಾದರೂ ತಲೆಗೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸ್ಥಳೀಯವಾಗಿ ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದ ಯುವಕನಾಗಿದ್ದ ರಶೀಕ್ ತಂದೆ, ತಾಯಿ, ಸಹೋದರ-ಸಹೋದರಿ ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article