ಪುಂಜಾಲಕಟ್ಟೆಯಲ್ಲಿ ಟೆಂಪೋ ಢಿಕ್ಕಿ: ಚಿಕಿತ್ಸೆ ಫಲಿಸದೆ ಗಾಯಾಳು ಮೃತ್ಯು

ಪುಂಜಾಲಕಟ್ಟೆಯಲ್ಲಿ ಟೆಂಪೋ ಢಿಕ್ಕಿ: ಚಿಕಿತ್ಸೆ ಫಲಿಸದೆ ಗಾಯಾಳು ಮೃತ್ಯು


ಬಂಟ್ವಾಳ: ಟೆಂಪೋ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತ ಪಟ್ಟ ಘಟನೆ ಸಂಭವಿಸಿದೆ.  

ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಬಾಬು ಅವರ ಪುತ್ರ ಸುನಿಲ್ (23) ಮೃತಪಟ್ಟ ಯುವಕನಾಗಿದ್ದಾನೆ.

ಸುನಿಲ್ ಅವರು ಪುಂಜಾಲಕಟ್ಟೆಯಲ್ಲಿ ಕೋಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಆ.20 ರಂದು ರಾತ್ರಿ ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಮಡಂತ್ಯಾರು ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ಟೆಂಪೋ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಸುನಿಲ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಸುನಿಲ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಬಾಬು ಅವರ ಮೂವರು ಮಕ್ಕಳಲ್ಲಿ ಸುನಿಲ್ ಕೊನೆಯವರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article