ರೆಖ್ಯಾ ಆನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: 5 ಲಕ್ಷ ಚೆಕ್ ವಿತರಣೆ

ರೆಖ್ಯಾ ಆನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: 5 ಲಕ್ಷ ಚೆಕ್ ವಿತರಣೆ


ಬೆಳ್ತಂಗಡಿ: ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕ ಬಾಲಕೃಷ್ಣ ಗೌಡ ಕಾಡಾನೆ ದಾಳಿಯಲ್ಲಿ ಮೃತಪಟ್ಟಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಒಟ್ಟು 20 ಲಕ್ಷ ರೂ. ಪರಿಹಾರವನ್ನು ಮಂಜೂರು ಮಾಡುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ, ಪ್ರಥಮ ಹಂತವಾಗಿ 5 ಲಕ್ಷ ರೂ. ಪರಿಹಾರ ಧನದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಉಳಿದ 15 ಲಕ್ಷ ರೂ. ಪರಿಹಾರವನ್ನು ನೇರವಾಗಿ ಮೃತರ ವಾರೀಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಸೂಚನೆ ನೀಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ವಲಯ ಅರಣ್ಯಾಧಿಕಾರಿ, ತಹಶೀಲ್ದಾರ್ ಎಸ್.ಎನ್. ನರಗುಂದ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮೃತ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಸರ್ಕಾರಿ ನೆರವು ಮತ್ತು ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಅವರು ನಿರ್ದೇಶನ ನೀಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article