ಮಾದಕ ವಸ್ತು ಸೇವನೆ

ಮಾದಕ ವಸ್ತು ಸೇವನೆ

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ನಿವಾಸಿ ಶ್ರೀರಾಜ್ ಶೆಟ್ಟಿ (36) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. 

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ. ಅವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಆ.2 ರಂದು ಸಂಜೆ ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ವ್ಯಕ್ತಿಯೋರ್ವ ನಶೆಯ ಅಮಲಿನಲ್ಲಿರುವುದನ್ನು ಗಮನಿಸಿದರು.

ಆತನನ್ನು ವಿಚಾರಿಸಿದಾಗ ಸಮರ್ಪಕ ಉತ್ತರ ನೀಡದೆ ಅಮಲಿನಲ್ಲಿಯೇ ಮಾತನಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದರು. ಈ ವೇಳೆ ಆತ ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. 

ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯ ಕಲಂ 27(b) ಹಾಗೂ 22(ಚಿ) ಅನ್ವಯ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article