ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಸಾರ್ವಜನಿಕರ ಆಕ್ರೋಶ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಸಾರ್ವಜನಿಕರ ಆಕ್ರೋಶ


ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೆಲ್ಯಡ್ಕ-ಇದ್ಮಾಳ್ ನಿವಾಸಿ ಬಾಲಕೃಷ್ಣ ಅವರು ಕಾಡಾನೆ ದಾಳಿಗೆ ಬಲಿಯಾದ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ. 

ಬಾಲಕೃಷ್ಣ ಅವರು ತಮ್ಮ ಜಮೀನಿನತ್ತ ತೆರಳುತ್ತಿದ್ದ ವೇಳೆ ಕಾಡಿನಿಂದ ಬಂದ ಒಂಟಿ ಆನೆ ಏಕಾಏಕಿ ದಾಳಿ ನಡೆಸಿದೆ. ಆನೆಯ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಅರಣ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. 

ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ಕಾಡಾನೆಗಳ ಹಾವಳಿ ತಡೆಗೆ ತಕ್ಷಣ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಹಾಗೂ ಅರಣ್ಯ ಅಂಚಿನ ಗ್ರಾಮಗಳ ಜನರ ಜೀವ-ಆಸ್ತಿಗೆ ರಕ್ಷಣೆ ಒದಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳ ವಿರುದ್ಧ ಪ್ರತಿಭಟನೆಯೂ ನಡೆಯಿತು. 

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article