ಕುಸಿದು ಬಿದ್ದು ವೃದ್ಧ ಸಾವು

ಕುಸಿದು ಬಿದ್ದು ವೃದ್ಧ ಸಾವು

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಬಾರೊಂದರ ಎದುರುಗಡೆ ವೃದ್ಧರೊಬ್ಬರ ಮೃತದೇಹ ಆ.18ರಂದು ಬೆಳಗ್ಗೆ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ (70) ಎಂದು ಪೊಲೀಸ್ ತನಿಖೆಯಿಂದ ಗುರುತಿಸಲಾಗಿದೆ. ಈ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article