ಪ್ರಾಥಮಿಕ, ಪ್ರೌಢಶಾಲೆ ಖಾಲಿ ಇರುವ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ
Thursday, August 13, 2026
ಮಂಗಳೂರು: ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಗಸ್ಟ್ 18 ರಿಂದ ಸೆಪ್ಟೆಂಬರ್ 7 ರವರೆಗೆ ಅರ್ಜಿ ಸಲ್ಲಿಸಬಹುದು. ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ https://schooleducation.karnataka.gov.in ನಲ್ಲಿ ಅಧಿಸೂಚನೆಗಳನ್ನು ಪ್ರಕಟಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅಧಿಸೂಚನೆ ಮತ್ತು ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ಓದಿ, ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.