ಇಸ್ಪಿಟ್ ಅಡ್ಡಕ್ಕೆ ದಾಳಿ: ಓರ್ವನ ಬಂಧನ, ಮೂರು ವಾಹನಗಳ ವಶ

ಇಸ್ಪಿಟ್ ಅಡ್ಡಕ್ಕೆ ದಾಳಿ: ಓರ್ವನ ಬಂಧನ, ಮೂರು ವಾಹನಗಳ ವಶ

ಕಡಬ: ಅಕ್ರಮವಾಗಿ ಅಂದರ್ ಬಾಹರ್ ಇಸ್ಪಿಟ್ ಆಟವಾಡುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಿದ್ದು, ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಕಡಬ ಕುದ್ಮಾರು ನಿವಾಸಿ ಗುರುವ (44) ಎಂದು ಗುರುತಿಸಲಾಗಿದೆ. 

ಆ.28 ರಂದು ಸಂಜೆ ಕಡಬದ ಹಳೆನೆರೆಂಕಿ ಗ್ರಾಮದ ಕುನ್ನಿಕು ಎಂಬಲ್ಲಿ ಅಕ್ರಮವಾಗಿ ಇಸ್ಪಿಟ್ ಆಡುತ್ತಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಜಂಬುರಾಜ್ ಮಹಾಜನ್ ಅವರಿಗೆ ಮಾಹಿತಿ ಬಂದ ಮೇರೆಗೆ ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಮೋಹನದಾಸ್ ರೈ ಎಂಬವರ ಜಾಗದಲ್ಲಿ ಕೃತ್ಯ ನಡೆಯುತ್ತಿರುವುದು ಕಂಡುಬಂದಿದೆ.

ಆಟವಾಡುತ್ತಿದ್ದ ಸ್ಥಳದಲ್ಲಿ 1,700 ರೂ. ಹಣ, 2 ದ್ವಿಚಕ್ರ ವಾಹನ, 1 ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದು, ತನಿಖೆ ನಡೆಯುತ್ತಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article