ಡಿವೈಡರ್‌ಗೆ ಆಂಬ್ಯುಲೆನ್ಸ್ ಢಿಕ್ಕಿ: ಸಾವು, ಗಾಯ

ಡಿವೈಡರ್‌ಗೆ ಆಂಬ್ಯುಲೆನ್ಸ್ ಢಿಕ್ಕಿ: ಸಾವು, ಗಾಯ

ಕಾಸರಗೋಡು: ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ಡಿವೈಡರ್‌ಗೆ  ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ರೋಗಿಯೊಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಬಂದ್ಯೋಡಿನಲ್ಲಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. 

ಮೃತರನ್ನು ಉಪ್ಪಳದ ಕೆಎಸ್‌ಇಬಿ ಗುತ್ತಿಗೆದಾರ ಹಾಗೂ ಬಂದ್ಯೋಡು ಸಮೀಪದ ಅಡ್ಕ ನಿವಾಸಿ ಅಶೋಕ್ (41) ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಪ್ರತಿಭಾ, ಸಹೋದರ ರಾಜೇಶ್, ರಾಜೇಶ್ ಅವರ ಪತ್ನಿ ಹಾಗೂ ಆಂಬ್ಯುಲೆನ್ಸ್ ಚಾಲಕ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಶೋಕ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಉಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಬಂದ್ಯೋಡು ಬಳಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶೋಕ್ ಅವರನ್ನು ಮೊದಲು ಉಪ್ಪಳದ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತ ಅಶೋಕ್ ಅವರು ಪತ್ನಿ ಹಾಗೂ ಏಕೈಕ ಪುತ್ರ ತನೂಷ್ ಅವರನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article