ಕಟೀಲು ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಪ್ರಾರ್ಥನೆ

ಕಟೀಲು ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಪ್ರಾರ್ಥನೆ


ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ಪುಣ್ಯ ಕ್ಷೇತ್ರದ ಪವಿತ್ರ ಯಕ್ಷಗಾನದ ವಿರುದ್ಧ ಇತ್ತೀಚಿಗೆ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರಗಳನ್ನು ತೀವ್ರವಾಗಿ ಖಂಡಿಸಿ ದ.ಕ. ಜಿಲ್ಲಾ ವಿಶ್ವ ಹಿಂದೂ ಪರಿಷತ್ ವತಿಯಿಂದ ಮಂಗಳವಾರ ಕಟೀಲು ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.

ಕಟೀಲು ದೇವಳದ ಅನುವಂಶಿಕ ಅರ್ಚಕರಾದ ವಾಸುದೇವ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಶ್ರೀಹರಿನಾರಾಯಣ ದಾಸ ಆಸ್ರಣ್ಣ, ಕಮಲಾದೇವಿಪ್ರಸಾದ ಆಸ್ರಣ್ಣ, ಕಿಶೋರ್ ಶೆಟ್ಟಿ ಕೊಡೆತ್ತೂರುಗುತ್ತು, ಬಿಪಿನ್‌ಚಂದ್ರ ಶೆಟ್ಟಿ ಕೊಡೆತ್ತೂರುಗುತ್ತು, ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಗಿರಿಪ್ರಕಾಶ್ ತಂತ್ರಿ ಪೊಳಲಿ, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ, ವಿಭಾಗ ಕಾರ್ಯದರ್ಶಿ ಶಿವಾನಂದ ಮೆಂಡನ್, ಕಾರ್ಯಾಧ್ಯಕ್ಷ ಗೋಪಾಲ್ ಕುತ್ತಾರ್, ನಗರ ಕಾರ್ಯಾಧ್ಯಕ್ಷ ಮನೋಹರ್ ಸುವರ್ಣ, ಸಹ ಸಂಯೋಜಕ ನವೀನ್ ಮೂಡುಶೆಡ್ಡೆ, ಜಿಲ್ಲಾ ಸಂಯೋಜಕ ಪ್ರೀತಮ್ ಶೆಟ್ಟಿ, ಪ್ರಾಂತ ಸಂಯೋಜಕ ಭುಜಂಗ ಕುಲಾಲ್, ಸಹಕಾರ್ಯದರ್ಶಿ ದಿನೇಶ್ ಮಿಜಾರ್, ಪ್ರಮುಖರಾದ ಈಶ್ವರ್ ಕಟೀಲ್, ಲೋಕಯ್ಯ ಸಾಲ್ಯಾನ್, ಕಸ್ತೂರಿಪಂಜ, ಸುದರ್ಶನ್ ಮೂಡಬಿದಿರೆ, ಭುವನಾಭಿರಾಮ ಉಡುಪ, ಕೇಶವ ಕರ್ಕೇರಾ, ಅಭಿಲಾಷ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article