ಕ್ರೆಡಿಟ್ ಕಾರ್ಡ್ ಹೆಸರಲ್ಲಿ ಸೈಬರ್ ವಂಚನೆ: ಲಕ್ಷ ರೂ. ಮಾಯ

ಕ್ರೆಡಿಟ್ ಕಾರ್ಡ್ ಹೆಸರಲ್ಲಿ ಸೈಬರ್ ವಂಚನೆ: ಲಕ್ಷ ರೂ. ಮಾಯ

ಕುಂದಾಪುರ: ಕ್ರೆಡಿಟ್ ಕಾರ್ಡ್‌ನ ಪ್ರೊಟೆಕ್ಷನ್ ಪ್ಲಾನ್ (protection pla‌n) ನವೀಕರಿಸುವುದಾಗಿ ನಂಬಿಸಿ ಸೈಬರ್ ವಂಚಕರು ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್‌ನಿಂದ ಒಂದು ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿರುವ ಘಟನೆ ಕೋಟದಲ್ಲಿ ನಡೆದಿದೆ.

ಕೋಟ ನಿವಾಸಿ ಐಶ್ವರ್ಯ ಅವರು ಕೋಟ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಜುಲೈ 27ರಂದು ಅವರ ಕ್ರೆಡಿಟ್ ಕಾರ್ಡ್‌ಗೆ ಸಂಬಂಧಿಸಿದ ಕಾರ್ಡ್ ಪ್ರೊಟೆಕ್ಷನ್ ಪ್ಲಾನ್ ಅನ್ನು ಅಪ್‌ಡೇಟ್ ಮಾಡಬೇಕಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಗೂಗಲ್ ಮೂಲಕ icici.helpsuseronline ಎಂಬ ಲಿಂಕ್ ಕಳುಹಿಸಿದ್ದು, ಅದನ್ನು ನಂಬಿ ಮಹಿಳೆ ಕ್ಲಿಕ್ ಮಾಡಿದ ತಕ್ಷಣ ಅವರ ಕ್ರೆಡಿಟ್ ಕಾರ್ಡ್‌ನಿಂದ ಒಟ್ಟು 1,99,696.06 ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ.

ಘಟನೆಯ ಕುರಿತು ಐಶ್ವರ್ಯ ಅವರ  ದೂರು ಆಧರಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 126/2026 ಕಲಂ:66(C),66(D) IT ACT ರಂತೆ ಪ್ರಕರಣ ದಾಖಲಾಗಿರುತ್ತದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article