ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ


ಕುಂದಾಪುರ: ಬ್ರಹ್ಮಾವರದಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ ವತಿಯಿಂದ ನಡೆಯುತ್ತಿರುವ ಅಗರಬತ್ತಿ ತಯಾರಿಕಾ ತರಬೇತಿಯನ್ನು  ಉಡುಪಿ ಜಿಲ್ಲಾಧಿಕಾರಿ  ಸ್ವರೂಪ ಟಿ.ಕೆ. ಅವರು ವೀಕ್ಷಿಸಿ, ತರಬೇತಿಯ ಪ್ರಗತಿಯ ಕುರಿತು ಪರಿಶೀಲಿಸಿದರು.

ದೇವಸ್ಥಾನಗಳಲ್ಲಿ ದೇವರಿಗೆ ಅರ್ಪಿಸಿದ ಹೂವುಗಳನ್ನು ಮರುಬಳಕೆ ಮಾಡಿಕೊಂಡು ಸುಗಂಧಭರಿತ ಅಗರಬತ್ತಿಯನ್ನು ತಯಾರಿಸಿ, ಸೂಕ್ತ ಬ್ರ್ಯಾಂಡಿಂಗ್ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು  ಕಲ್ಪಿಸುವುದು ಮತ್ತು ಸ್ವ ಉದ್ಯೋಗದ ಮೂಲಕ ಮಹಿಳಾ ಸಬಲೀಕರಣಕ್ಕೆ ಉತ್ತೇಜನ ನೀಡುವುದು ಈ 12 ದಿನಗಳ ತರಬೇತಿಯ ಪ್ರಮುಖ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ಮಹಿಳೆಯರು ಸ್ವಯಂಪ್ರೇರಿತರಾಗಿ ಮುಂದೆ ಬಂದು ತರಬೇತಿಯಲ್ಲಿ ಭಾಗವಹಿಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. ನಂತರ ಅವರು ತರಬೇತಿಯಲ್ಲಿ ಭಾಗವಹಿಸುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ತರಬೇತಿ ಅನುಭವಗಳನ್ನು ಆಲಿಸಿದರು. ಶಿಬಿರಾರ್ಥಿಗಳು ತಯಾರಿಸಿದ ಅಗರಬತ್ತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ತರಬೇತಿಯನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು, ತರಬೇತಿಯ ಉದ್ದೇಶವನ್ನು ಯಶಸ್ವಿಯಾಗಿ ಸಾಕಾರಗೊಳಿಸುವ ಮೂಲಕ ಸ್ವಾವಲಂಬಿ ಉದ್ಯಮಿಗಳಾಗಿ ಬೆಳೆಯುವಂತೆ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ  ರಾಘವೇಂದ್ರ, ವ್ಯವಸ್ಥಾಪಕರು, ವಿ ಕೇರ್ ಸೊಸೈಟಿ, ಗಿರೀಶ್, ಕಂದಾಯ ಅಧಿಕಾರಿ, ಹೇರೂರು ಹಾಗೂ ರುಡ್ಸೆಟ್ ಸಂಸ್ಥೆಯ ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article