ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಗೆ ಬ್ರಹ್ಮಾವರ ಪತ್ರಕರ್ತರ ಸಂಘ ಖಂಡನೆ

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಗೆ ಬ್ರಹ್ಮಾವರ ಪತ್ರಕರ್ತರ ಸಂಘ ಖಂಡನೆ

ಕುಂದಾಪುರ: ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ಕುರಿತು ವರದಿ ಮಾಡಿದ್ದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಕುಂದಾಪುರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಹಲ್ಲೆ ಪ್ರಕರಣವನ್ನು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.

ಆಸ್ಪತ್ರೆಯ ಸರ್ಜನ್ ಡಾ. ಮಹೇಂದ್ರ ಶೆಟ್ಟಿ ಅವರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯವಾಗಿದ್ದು, ವೈದ್ಯ ವೃತ್ತಿಯ ಘನತೆ ಹಾಗೂ ಸಾರ್ವಜನಿಕ ಸೇವೆಯ ಜವಾಬ್ದಾರಿಗೆ ವಿರುದ್ಧವಾದ ನಡೆ ಎಂದು ಸಂಘದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರು ಸಾರ್ವಜನಿಕ ಸಮಸ್ಯೆಗಳನ್ನು ಜನರ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದು, ವರದಿಯೊಂದಕ್ಕೆ ಆಕ್ಷೇಪವಿದ್ದಲ್ಲಿ ಕಾನೂನುಬದ್ಧವಾಗಿ ಸ್ಪಷ್ಟನೆ ನೀಡುವ ಅಥವಾ ಪರಿಹಾರ ಕಂಡುಕೊಳ್ಳುವ ಬದಲು ಹಲ್ಲೆಯಂತಹ ದುಂಡಾವರ್ತನೆ ನಡೆಸಿರುವುದು ಅಕ್ಷಮ್ಯ ಎಂದು ಸಂಘ ತಿಳಿಸಿದೆ.

ಹಲ್ಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘ ಆಗ್ರಹಿಸಿದೆ.

ಪತ್ರಕರ್ತರು ಯಾವುದೇ ಭಯ, ಒತ್ತಡ ಅಥವಾ ಬೆದರಿಕೆಗೆ ಒಳಗಾಗದೆ ತಮ್ಮ ವೃತ್ತಿಯನ್ನು ನಿರ್ವಹಿಸುವಂತಹ ಸುರಕ್ಷಿತ ವಾತಾವರಣವನ್ನು ಜಿಲ್ಲೆಯಲ್ಲಿ ನಿರ್ಮಿಸಬೇಕು. ಪತ್ರಕರ್ತರ ಮೇಲಿನ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರು ನಿಷ್ಪಕ್ಷಪಾತ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಒತ್ತಾಯಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article